ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ರಾಯಬಾಗ: "ಒತ್ತುವರಿದಾರರಿಂದ ಸ್ಮಶಾನ ಭೂಮಿ ರಕ್ಷಿಸಿ"- ತಹಶೀಲ್ದಾರ್ ಗೆ ಘೇರಾವ್ ಹಾಕಿ ಪ್ರತಿಭಟನೆ

ರಾಯಬಾಗ: ತಾಲೂಕಿನ ಹುಬ್ಬರವಾಡಿ ಗ್ರಾಮದ ಜನರು ರಾಯಬಾಗ ತಹಶೀಲ್ದಾರ್ ಕಚೇರಿಯ ಮುಂದೆ ಪ್ರತಿಭಟನೆ ನಡೆಸಿದ್ದು, ಹುಬ್ಬರವಾಡಿ ಗ್ರಾಮದಲ್ಲಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸ್ಮಶಾನ ಭೂಮಿಯನ್ನು ಕೆಲವರು ಒತ್ತುವರಿ ಮಾಡುತ್ತಿದ್ದು, ಸ್ಮಶಾನ ಭೂಮಿ ಕಬಳಿಕೆಯಾಗದಿರಲೆಂದು ಸ್ಮಶಾನ ಭೂಮಿಗೆ ಬೇಲಿ ನಿರ್ಮಾಣ ಮಾಡಿ ಕೊಡಿ ಎಂದು ಕಚೇರಿ ಎದುರು ಧರಣಿ ನಡೆಸಿದ್ದಾರೆ. ಇದಕ್ಕೆ ರಾಯಬಾಗ ತಹಶೀಲ್ದಾರ್ ಸುರೇಶ್ ಮುಂಜೆ ಪ್ರತಿಭಟನಾಕಾರರ ಪ್ರಶ್ನೆಗಳಿಗೆ ಹಾರಿಕೆಯ ಉತ್ತರ ನೀಡಿ ಪಲಾಯನವಾದ ಮಾಡಿದ್ದರಿಂದ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಯಬಾಗದ ತಹಶೀಲ್ದಾರ್ ಕಚೇರಿಯಲ್ಲಿ ನಡೆದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ದೌರ್ಜನ್ಯ ತಡೆ ಸಭೆಯಲ್ಲಿ ಸ್ಮಶಾನ ಭೂಮಿ ಒತ್ತುವರಿ ತಡೆಯಬೇಕೆಂದು ಚಿಕ್ಕೋಡಿ ಉಪ ವಿಭಾಗ ಅಧಿಕಾರಿಗೆ ಮನವಿ ಸಲ್ಲಿಸಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿರುವ

ಚಿಕ್ಕೋಡಿ ಉಪ ವಿಭಾಗದ ಅಧಿಕಾರಿ ಸಂಪಾಗವಿ ಸದ್ಯದಲ್ಲಿಯೇ ಸ್ಮಶಾನ ಭೂಮಿ ಸರ್ವೇ ಮಾಡಿ ಬೇಲಿ ಹಾಕಿ ಕೊಡಲಾಗುವುದು ಎಂದು ಭರವಸೆ ನೀಡಿದ್ದಾರೆ.

ವರದಿ : ಚಿದಾನಂದ ಐಹೊಳೆ, ಪಬ್ಲಿಕ್ ನೆಕ್ಸ್ಟ್, ರಾಯಬಾಗ

Edited By : Vinayak Patil
Kshetra Samachara

Kshetra Samachara

08/01/2025 06:16 pm

Cinque Terre

11.88 K

Cinque Terre

0

ಸಂಬಂಧಿತ ಸುದ್ದಿ