ಚಳ್ಳಕೆರೆ: ಪಾವಗಡ ತಾಲೂಕಿನ ಸ್ಥಳೀಯ ಪತ್ರಕರ್ತ ರಾಮಾಂಜನೇಯರವರ ಮೇಲೆ ಸಾರ್ವಜನಿಕ ಸ್ಥಳದಲ್ಲಿ ಮಾರಣಾಂತಿಕ ಹಲ್ಲೆ ಮಾಡಿರುವವರನ್ನು ಕೂಡಲೇ ಬಂಧಿಸುವಂತೆ ಒತ್ತಾಯಿಸಿ ತಾಲೂಕು ಪತ್ರಕರ್ತರ ಗೆಳೆಯರ ಬಳಗ ವತಿಯಿಂದ ತಹಶೀಲ್ದಾರ್ ರವರಿಗೆ ಮನವಿ ಸಲ್ಲಿಸಲಾಯಿತು.
ಈ ವೇಳೆ ಮಾತನಾಡಿದ ಪತ್ರಕರ್ತ ಕೊರಲಕುಂಟೆ ತಿಪ್ಪೇಸ್ವಾಮಿ ಇತ್ತೀಚಿನ ದಿನಗಳಲ್ಲಿ ವರದಿಗಾರರ ಮೇಲೆ ಹಾಡು ಹಗಲೇ ಹಲ್ಲೇ ಮಾಡುವುದು ಅವಾಚ್ಯ ಶಬ್ದಗಳಿಂದ ಸಾರ್ವಜನಿಕವಾಗಿ ನಿಂದಿಸುವುದು ಸರ್ವೇಸಾಮಾನ್ಯವಾಗಿದ್ದು ರಾಜಕಾರಣಿಗಳ ಅಧಿಕಾರಿಗಳ ಭ್ರಷ್ಟಾಚಾರವನ್ನು ಸಮಾಜದ ಮುಖ್ಯ ವಾಹಿನಿಗೆ ತರುವಲ್ಲಿ ಕ್ರಿಯಾಶೀಲವಾಗಿರುವ ಸರ್ಕಾರದ ರಕ್ಷಣೆ ಇಲ್ಲದಿದ್ದರೂ ತಮ್ಮ ಆತ್ಮವಿಶ್ವಾಸದಿಂದ ಕಾರ್ಯನಿರ್ವಹಿಸುತ್ತಿರುವ ಪತ್ರಕರ್ತರ ಮೇಲೆ ಹಲ್ಲೆ ಮಾಡುವ ಘಟನೆಗಳು ರಾಜ್ಯ ಹಾಗೂ ದೇಶದಲ್ಲಿ ನಡೆಯುತ್ತಿವೆ ಇದಕ್ಕೆ ಪೂರಕವಾಗಿ ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ರಾಮಾಂಜನೇಯ ಎಂಬ ಪತ್ರಿಕಾ ಸಂಪಾದಕರ ಮೇಲೆ ಮಹಿಳೆಯರು ಚಪ್ಪಲಿಯಿಂದ ಹೊಡೆದಿರುವುದು ಮಹಿಳಾ ನಾಗರಿಕ ಸಮಾಜ ತಲೆತಗ್ಗಿಸುವಂತಾಗಿದೆ ಯಾವುದೇ ವ್ಯಕ್ತಿ ತಪ್ಪು ಮಾಡಿದ್ದರೆ ಅಂತಹವರನ್ನು ಶಿಕ್ಷಿಸಲು ಕಾನೂನು ಇದೆ ಕಾನೂನನ್ನು ಕೈಗೆತ್ತಿಕೊಳ್ಳುವುದು ಅಕ್ರಮ ಅಪರಾಧವಾಗಿದೆ ಮಹಿಳೆಯರಿಗೆ ಮೀಸಲಾತಿ ದೊರಕಿಸಿಕೊಡುವಲ್ಲಿ ಪತ್ರಕರ್ತರ ಪಾತ್ರ ಅಪಾರವಾಗಿದ್ದು ಇಂತಹವರ ಮೇಲೆ ಹಲ್ಲೆ ಮಾಡಿರುವುದು ಮಹಿಳೆಯರ ಘನತೆಗೆ ಧಕ್ಕೆ ತಂದಿದೆ ಕೂಡಲೇ ಇವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಪತ್ರಕರ್ತ ಸುರೇಶ ಬೆಳಗೆರೆ ಮಾತನಾಡಿ. ಪತ್ರಕರ್ತರ ಮೇಲೆ ಹಲ್ಲೆ ಮಾಡಿರುವುದು ಸಮಾಜ ತಲೆತಗ್ಗಿಸುವಂತಹ ಕೆಲಸವಾಗಿದೆ . ಸಮಾಜದ ಅಂಕು ಡೊಂಕುಗಳನ್ನು ತಿದ್ದುವಂತಹ ಪತ್ರಕರ್ತರಿಗೆ ಹೆಚ್ಚಿನ ಭದ್ರತೆ ಬೇಕಿದೆ. ಸಮಾಜದಲ್ಲಿ ನಡೆಯುವಂತಹ ಅನ್ಯಾಯಗಳನ್ನ ಎತ್ತಿ ಹಿಡಿಯುವವಲ್ಲಿ ಪತ್ರಕರ್ತರ ಪಾತ್ರ ಬಹುಮುಖ್ಯದ ವಾದದ್ದು ಇಂತಹ ಪತ್ರಕರ್ತರಿಗೆ ಭದ್ರತೆ ಇಲ್ಲದಂತಾಗಿದೆ ಎಂದರು ...
Kshetra Samachara
08/01/2025 06:53 pm