ಬೆಳಗಾವಿ : ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಬೆಂಡಿಗೇರಿ ಗ್ರಾಮದಲ್ಲಿ ನೂತನ ಗ್ರಾಮ ಪಂಚಾಯತ್ ಕಾರ್ಯಾಲಯ ಕಟ್ಟಡ ನಿರ್ಮಾಣದ ಕಾಮಗಾರಿಗೆ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಬುಧವಾರ ಪೂಜೆ ನೆರವೇರಿಸಿ ಚಾಲನೆ ನೀಡಿದರು.
ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಗ್ರಾಮಸ್ಥರ ಸಮ್ಮುಖದಲ್ಲಿ ಭೂಮಿ ಪೂಜೆ ನೆರವೇರಿಸಿದ ಅವರು, ಕಟ್ಟಡ ಕಾಮಗಾರಿಯ ವೇಳೆ ಗ್ರಾಮದ ಹಿರಿಯರ ಸಲಹೆ ಸೂಚನೆ ಪಡೆದು, ನಿಗದಿತ ಸಮಯದಲ್ಲಿ ಕಟ್ಟಡವನ್ನು ಪೂರ್ಣಗೊಳಿಸುವಂತೆ ಗುತ್ತಿಗೆದಾರರಿಗೆ ಸೂಚನೆ ನೀಡಿದರು.
ಗ್ರಾಮೀಣ ಕ್ಷೇತ್ರದಲ್ಲಿ ನಿರಂತರವಾಗಿ ಅಭಿವೃದ್ಧಿ ಕೆಲಸಗಳು ನಡೆದಿವೆ. ಮುಂದಿನ 15 ದಿನಗಳಲ್ಲಿ ಹಲವಾರು ಸಮುದಾಯ ಭವನ, ಗ್ರಾಮ ಪಂಚಾಯಿತಿ ಕಟ್ಟಡ ಸೇರಿದಂತೆ ಬಹಳಷ್ಟು ಕಾಮಗಾರಿಗಳಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಚಾಲನೆ ನೀಡಲಿದ್ದಾರೆ. ಎಲ್ಲರ ಸಹಕಾರದೊಂದಿಗೆ ಕ್ಷೇತ್ರದಲ್ಲಿ ಅಭಿವೃದ್ಧಿಯ ಕ್ರಾಂತಿಯನ್ನೇ ಮಾಡಲಾಗುತ್ತಿದೆ ಎಂದು ಚನ್ನರಾಜ ಹಟ್ಟಿಹೊಳಿ ತಿಳಿಸಿದರು.
ಇದೇ ವೇಳೆ, ಬೆಂಡಿಗೇರಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಐದು ಹೆಚ್ಚುವರಿ ಕೊಠಡಿ ಜೊತೆಗೆ ಸ್ಮಾರ್ಟ್ ಕ್ಲಾಸ್ ನ್ನು ಚನ್ನರಾಜ ಹಟ್ಟಿಹೊಳಿ ಉದ್ಘಾಟಿಸಿದರು.
PublicNext
08/01/2025 07:17 pm