ಯಲ್ಲಾಪುರ: ರಸ್ತೆ ಕಾಮಗಾರಿ ನಿರ್ವಹಿಸುತ್ತಿದ್ದ ಕಾರ್ಮಿಕನಿಗೆ ಕಂಟೇನರ್ ಲಾರಿ ಡಿಕ್ಕಿ ಹೊಡೆದ ಪರಿಣಾಮ ಕಾರ್ಮಿಕನು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಯಲ್ಲಾಪುರ ತಾಲೂಕಿನ ಅರಬೈಲ್ ಘಟ್ಟದ ತಿರುವಿನಲ್ಲಿ ಬುಧವಾರ ನಡೆದಿದೆ.
ಅರಬೈಲ್ ಘಟ್ಟದಲ್ಲಿ ಹೆದ್ದಾರಿ ದುರಸ್ತಿ ಕಾಮಗಾರಿ ನಡೆಯುತ್ತಿದ್ದು, ಈ ಸಂದರ್ಭದಲ್ಲಿ ಯಲ್ಲಾಪುರ ಕಡೆಯಿಂದ ವೇಗವಾಗಿ ಬಂದ ಕಂಟೇನರ್ ಲಾರಿಯು ರಸ್ತೆ ಕಾಮಗಾರಿ ನಿರ್ವಹಿಸುತ್ತಿದ್ದ ಕೊಪ್ಪಳ ಮೂಲದ ಅಮ್ಜದ್ (40) ಎಂಬ ಕಾರ್ಮಿಕನ ಮೇಲೆ ಹರಿದ ಪರಿಣಾಮ ಕಾರ್ಮಿಕನು ಸ್ಥಳದಲ್ಲಿಯೇ ಮೃತಪಟ್ಟಿದ್ದು, ಹೆದ್ದಾರಿಯ ತಿರುವಿನಲ್ಲಿ ಕಂಟೇನರ್ ಲಾರಿಯು ಪಲ್ಟಿಯಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿನೀಡಿ ಪರಿಶೀಲನೆ ನಡೆಸಿದ್ದಾರೆ.
PublicNext
08/01/2025 07:32 pm