ಹುಬ್ಬಳ್ಳಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಡಾ.ಬಿ.ಆರ್. ಅಂಬೇಡ್ಕರ್ ಅವರಿಗೆ ಅಪಮಾನ ಮಾಡಿದ್ದಾರೆ ಎಂದು ಆರೋಪಿಸಿ ಅವರನ್ನು ಮಂತ್ರಿ ಸ್ಥಾನದಿಂದ ವಜಾ ಗೊಳಿಸಬೇಕು ಎಂದು ವಿವಿಧ ದಲಿತ ಸಂಘಟನೆಗಳು ಹು-ಧಾ ಬಂದ್‌ಗೆ ಕರೆ ನೀಡಿದ ಹಿನ್ನೆಲೆ ಖಾಕಿಪಡೆ ಬಂದೋಬಸ್ತ್ ವ್ಯವಸ್ಥೆಗೆ ಸಜ್ಜಾಗಿದೆ.
ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಇಂದು ಕಮಿಷನರ್ ಎನ್ ಶಶಿಕುಮಾರ್ ನೇತೃತ್ವದಲ್ಲಿ ಎಲ್ಲಾ ಪೊಲೀಸ್ ಅಧಿಕಾರಿಗಳು ಬಂದೋಬಸ್ತ್ ಬಗ್ಗೆ ಸಮಾಲೋಚನೆ ನಡೆಸಿದ್ದಾರೆ. ಅಲ್ಲದೇ ಅಧಿಕಾರಿಗಳಿಗೆ ಹಲವು ಸೂಚನೆ ಕೊಟ್ಟಿದ್ದಾರೆ.
ಈ ವೇಳೆ ಮಾತನಾಡಿದ ಅವರು, ಬಂದ್ ಅನ್ನುವ ಯಾವುದೇ ಕಾನ್ಸೆಪ್ಟ್ ಇಲ್ಲ, ಸಂಘಟನಾಕಾರರು ಬಲವಂತವಾಗಿ ಬಂದ್ ಮಾಡುವಂತಿಲ್ಲ, ಶಾಂತಿಯುತವಾಗಿ ಪ್ರತಿಭಟನೆ ಮಾಡಬೇಕಷ್ಟೇ ಬಲವಂತವಾಗಿ ಮಾಡಲು ಮುಂದಾದ್ರೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುತ್ತೇವೆ ಎಂದು ವಾರ್ನ್ ಮಾಡಿದ್ದಾರೆ. ಅಲ್ಲದೇ
ಈ ನಿಟ್ಟಿನಲ್ಲಿ 2000 ಸಿಬ್ಬಂದಿಗಳನ್ನು ಕೂಡ ನಿಯೋಜಿಸಲಾಗಿದೆ ಎಂದು ಕಮಿಷನರ್ ಶಶಿಕುಮಾರ್ ತಿಳಿಸಿದ್ದಾರೆ.
ಸದ್ಯ ನಾಳೆ ಹು-ಧಾ ಬಂದ್‌ಗೆ ಪೊಲೀಸರು ಮುನ್ನೆಚ್ಚರಿಕೆ ಕ್ರಮವಾಗಿ ಬಂದೋಬಸ್ತ್ ವ್ಯವಸ್ಥೆ ಮಾಡಿಕೊಂಡಿದ್ದು, ಅದನ್ನು ಮೀರಿ ಕಾನೂನು ಸುವ್ಯವಸ್ಥೆಗೆ ದಕ್ಕೆ ತರುವ ಕಾರ್ಯಕ್ಕೆ ಮುಂದಾದ್ರೆ ಮುಲಾಜಿಲ್ಲದೆ ಕ್ರಮ ಜರುಗಿಸಲಾಗುವುದು ಎಂದು ಕಮಿಷನರ್ ಶಶಿಕುಮಾರ್ ಸಂಘಟನಕಾರರಿಗೆ ಎಚ್ಚರಿಕೆಯನ್ನು ನೀಡಿದ್ದಾರೆ.
ವಿನಯ ರೆಡ್ಡಿ ಕ್ರೈಂ ಬ್ಯುರೋ ಪಬ್ಲಿಕ್ ನೆಕ್ಸ್ಟ್
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
08/01/2025 08:08 pm