ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹಾಸನ: ರಸ್ತೆ ಕಾಮಗಾರಿ ಮಾಡಿಸುತ್ತಿದ್ದ ಗುತ್ತಿಗೆದಾರನ ಮೇಲೆ ಮಾರಣಾಂತಿಕ ಹಲ್ಲೆ

ಹಾಸನ: ರಸ್ತೆ ಕಾಮಗಾರಿ ಮಾಡಿಸುತ್ತಿದ್ದ ಗುತ್ತಿಗೆದಾರನಿಗೆ ದೊಣ್ಣೆಗಳಿಂದ ಮನಬಂದಂತೆ ಥಳಿಸಿರುವ ಘಟನೆ ಹಾಸನ ತಾಲ್ಲೂಕಿನ ಬಿ.ಬೈರಾಪುರ ಗ್ರಾಮದಲ್ಲಿ ನಡೆದಿದೆ.

ಸುಚಿತ್ ಎಲ್ ಹಲ್ಲೆಗೊಳಗಾದ ಯುವ ಗುತ್ತಿಗೆದಾರ. ಸುಚಿತ್ ಅವರು ರಸ್ತೆ ಕಾಮಗಾರಿ ನಡೆಸುತ್ತಿದ್ದ ಕಾರಣ ರಸ್ತೆಯಲ್ಲಿ ಯಾರು ಹೋಗದಂತೆ ಸೂಚನಾ ಫಲಕ ಅಳವಡಿಸಿದ್ದರು. ಈ ವೇಳೆ ನಾಲ್ವರು ಅದೇ ರಸ್ತೆಯಲ್ಲಿ ಹೋಗಲು ಬಂದಿದ್ದಾರೆ. ಇದಕ್ಕೆ ಅಡ್ಡಿಪಡಿಸಿದ ಗುತ್ತಿಗೆದಾರ ಸುಚಿತ್ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾರೆ. ಗಂಭೀರವಾಗಿ ಗಾಯಗೊಂಡಿರುವ ಗುತ್ತಿಗೆದಾರ ಸುಚಿತ್‌ರನ್ನು ಹಾಸನದ ಜಿಲ್ಲಾಸ್ಪತ್ರೆಗೆ ಸೇರಿಸಲಾಗಿದೆ. ಹಲ್ಲೆ ನಡೆಸಿರುವ ನಾಲ್ವರ ವಿರುದ್ಧ ದುದ್ದ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

Edited By : Manjunath H D
PublicNext

PublicNext

08/01/2025 08:20 pm

Cinque Terre

54.23 K

Cinque Terre

4

ಸಂಬಂಧಿತ ಸುದ್ದಿ