ಬೆಂಗಳೂರು: ರಾಜ್ಯಪಾಲ ಥಾವರ್ ಚೆಂದ್ ಗೆಹ್ಲೋಟ್ ಅವರನ್ನು ಸಿಎಂ ಸಿದ್ದರಾಮಯ್ಯ ರಾಜಭವನದಲ್ಲಿ ಭೇಟಿಯಾಗಿ ಸಾಂಪ್ರದಾಯಿಕವಾಗಿ ರಾಜ್ಯಪಾಲರಿಗೆ ಹೊಸ ವರ್ಷದ ಶುಭಾಶಯ ಕೋರಿದರು. ಈ ವೇಳೆ ಉಭಯ ಕುಶಲೋಪರಿ ಚರ್ಚೆ ನಡೆಸಿದ್ದಾರೆ.
ಸುಮಾರು ಅರ್ಧ ಗಂಟೆಗಳ ಕಾಲ ರಾಜ್ಯಪಾಲರೊಂದಿಗೆ ಸಿಎಂ ಚರ್ಚೆ ನಡೆಸಿದ್ದಾರೆ. ಈ ವೇಳೆ ಎಂಎಲ್‌ಸಿ ಗೋವಿಂದರಾಜು, ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಅಪರ ಮುಖ್ಯ ಕಾರ್ಯದರ್ಶಿ ಎಲ್ ಕೆ ಅತೀಕ್, ಕಾರ್ಯದರ್ಶಿ ಪಿ.ಸಿ.ಜಾಫರ್ ಸೇರಿದಂತೆ ಮುಂತಾದ ಗಣ್ಯರು ಉಪಸ್ಥಿತಿರಿದ್ದರು.
PublicNext
08/01/2025 08:30 pm