ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಮತ್ತೊಂದು ಘೋರ ಕೃತ್ಯ ನಡೆದಿದೆ. ಪತಿಯೇ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಬರ್ಬರವಾಗಿ ಹತ್ಯೆಗೈದುರುವ ಘಟನೆ ಪೀಣ್ಯ ಪೊಲೀಸ್ ಠಾಣಾ ವ್ಯಾಪ್ತಿಯ ಜಾಲಹಳ್ಳಿ ಕ್ರಾಸ್ ಬಳಿ ನಡೆದಿದೆ.
ಮೂಲತಃ ನೆಲಮಂಗಲ ನಿವಾಸಿಯಾಗಿರುವ ಗಂಗರಾಜು ಹೋಂ ಗಾರ್ಡ್ ಆಗಿ ಕೆಲಸ ಮಾಡ್ತಿದ್ದ, ಈತ
ಪತ್ನಿ ಭಾಗ್ಯ(38), ಭಾಗ್ಯ ಅಕ್ಕನ ಮಗಳು ಹೇಮಾವತಿ(22) ಮತ್ತು ಮಗಳು ನವ್ಯಾ(19) ಬರ್ಬರ ಹತ್ಯೆಗೈದು ಪರಾರಿಯಾಗಿದ್ದ.
ವಿಷಯ ತಿಳಿದು ಸ್ಥಳಕ್ಕೆ ಹೆಚ್ಚುವರಿ ಆಯುಕ್ತರಾದ ವಿಕಾಶ್ ಕುಮಾರ್ ವಿಕಾಶ್ ಮತ್ತು ಪೀಣ್ಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಮೂರು ಹೆಂಗಸರ ಕೊಲೆ ನಡೆದಿರುವುದು ಪತ್ತೆಯಾಗಿದೆ. ಮಹಿಳೆ ಭಾಗ್ಯ, ಆಕೆಯ ಮಗಳು ನವ್ಯ, ಸಂಬಂಧಿ ಹೇಮಾವತಿ ಎಂಬುವವರ ಕೊಲೆಯಾಗಿದೆ.
ಕೊಲೆ ಮಾಡಿದ ಬಳಿಕ ವೆಪನ್ ಸಮೇತ ಆತನೇ ಠಾಣೆಗೆ ಬಂದು ಶರಣಾಗಿದ್ದಾನೆ. ಮೂಲತಃ ಇವರು ನೆಲಮಂಗಲದವರು. ಕಳೆದ ಆರು ವರ್ಷದಿಂದ ಬಾಡಿಗೆ ಮನೆಯಲ್ಲಿ ಇಲ್ಲಿ ವಾಸವಾಗಿದ್ದರು. ಯಾಕೆ ಕೊಲೆ ಮಾಡಿದ್ದಾರೆ ಎಂಬ ಬಗ್ಗೆ ವಿಚಾರಣೆ ಮಾಡಲಾಗುತ್ತೆ. ನಂತರದಲ್ಲಿ ತಿಳಿಯಲಿದೆ ಎಂದು ಆಯುಕ್ತರು ತಿಳಿಸಿದ್ದಾರೆ.
PublicNext
08/01/2025 10:45 pm