ಅಮರಾವತಿ: ತಿರುಪತಿ ತಿರುಮಲ ದೇವಾಲಯದಲ್ಲಿ ಭಾರೀ ಕಾಲ್ತುಳಿತ ಸಂಭವಿಸಿದೆ. ಈ ದುರಂತದಲ್ಲಿ ಏಳು ಭಕ್ತರು ಸಾವನ್ನಪ್ಪಿದ್ದು, ಮೃತರ ಸಂಖ್ಯೆ ಏರುತ್ತಲೇ ಇದೆ.
ಇನ್ನು, ತೀವ್ರವಾಗಿ ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ. ದೇವಾಲಯದಲ್ಲಿ ವೈಕುಂಠ ಏಕಾದಶಿ ದರ್ಶನದ ವಿಶೇಷ ಟಿಕೆಟ್ ಪಡೆಯುವ ವೇಳೆ ಈ ದುರಂತ ಸಂಭವಿಸಿದೆ ಎಂದು ತಿಳಿದು ಬಂದಿದೆ.
ನಾಳೆ ಶುಕ್ರವಾರ ವೈಕುಂಠ ಏಕಾದಶಿ ವಿಶೇಷ ದರ್ಶನದ ಟಿಕೆಟ್ ಪಡೆಯುವ ಸಂದರ್ಭದ ನೂಕು ನುಗ್ಗಲು ಸಂಭವಿಸಿದೆ. ಈ ಸಂದರ್ಭದಲ್ಲಿ ಉಂಟಾದ ಕಾಲ್ತುಳಿತದಲ್ಲಿ ಮಹಿಳೆ ಸೇರಿ 6 ಭಕ್ತರು ಮೃತಪಟ್ಟಿದ್ದಾರೆ
PublicNext
09/01/2025 07:53 am