ಮುಲ್ಕಿ: ರಾಷ್ಟ್ರೀಯ ಹೆದ್ದಾರಿ 66ರ ಮುಲ್ಕಿ ಬಸ್ ನಿಲ್ದಾಣದ ಬಳಿ ಹೆದ್ದಾರಿ ಕ್ರಾಸ್ ಮಾಡುತ್ತಿದ್ದ ವ್ಯಕ್ತಿಯೊಬ್ಬರಿಗೆ ಬೈಕ್ ಡಿಕ್ಕಿಯಾಗಿ ಭೀಕರ ಅಪಘಾತ ಸಂಭವಿಸಿದ ದೃಶ್ಯ ಸ್ಥಳೀಯ ಅಂಗಡಿಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಮಂಗಳೂರು ಕಡೆಯಿಂದ ಕಾರ್ಕಳ ಕಡೆಗೆ ಹೋಗುತ್ತಿದ್ದ ಕಾಲೇಜು ವಿದ್ಯಾರ್ಥಿಗಳ ಬೈಕ್, ಮುಲ್ಕಿ ಬಸ್ ನಿಲ್ದಾಣದ ಬಳಿ ಏಕಾಏಕಿ ಹೆದ್ದಾರಿ ಕ್ರಾಸ್ ಮಾಡುತ್ತಿದ್ದ ವ್ಯಕ್ತಿಗೆ ಡಿಕ್ಕಿ ಹೊಡೆದಿದೆ.
ಈ ಸಂದರ್ಭ ಬೈಕ್ ಸವಾರ ಹಾಗೂ ಸಹಸವಾರ ಸಿನಿಮೀಯ ಮಾದರಿಯಲ್ಲಿ ಹೆದ್ದಾರಿಯಲ್ಲಿ ಜಾರಿ ಉರುಳಿ ಬಿದ್ದಿದ್ದಾರೆ.
ಆದರೆ, ಭೀಕರ ಅಪಘಾತದಲ್ಲಿ ಬೈಕ್ ಸವಾರ ಹಾಗೂ ಸಹ ಸವಾರ ಮತ್ತು ಹೆದ್ದಾರಿ ಕ್ರಾಸ್ ಮಾಡುತ್ತಿದ್ದ ವ್ಯಕ್ತಿ ಅಲ್ಪಸ್ವಲ್ಪ ಗಾಯಗಳೊಂದಿಗೆ ಪವಾಡ ಸದೃಶ ರೀತಿಯಲ್ಲಿ ಪಾರಾಗಿದ್ದಾರೆ.
Kshetra Samachara
09/01/2025 07:57 am