ತಿರುಪತಿ : ತಿರುಪತಿಯಲ್ಲಿ 50 ಕ್ಕೂ ಹೆಚ್ಚು ಮಂದಿಗೆ ಕಾಲ್ತುಳಿತದಲ್ಲಿ ಗಂಭೀರ ಗಾಯವಾಗಿದೆ. ಗಂಭೀರವಾಗಿ ಗಾಯಗೊಂಡವರನ್ನು ಏರ್ ಲಿಫ್ಟ್ ಮಾಡುವಂತೆ ಸೂಚನೆ ಕೊಡಲಾಗಿದೆ.
ಬೆಳಗ್ಗೆ 11 ಗಂಟೆಗೆ ಸಿಎಂ ಚಂದ್ರಬಾಬು ನಾಯ್ಡು ತಿರುಪತಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ. ಗಾಯಾಳುಗಳ ಆರೋಗ್ಯ ವಿಚಾರಿಸಲಿರುವ ಸಿಎಂ ಇದೇ ವೇಳೆ ಮೃತರ ಕುಟುಂಬಕ್ಕೆ ಪರಿಹಾರ ಘೋಷಣೆ ಮಾಡುವ ಸಾಧ್ಯತೆ ಇದೆ. ಇನ್ನು ಬಳ್ಳಾರಿ ಮೂಲದ ನಿರ್ಮಲ ಕಾಲ್ತುಳಿತಕ್ಕೆ ಸಾವನ್ನಪ್ಪಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಕಾಲ್ತುಳಿತಕ್ಕೆ ಐವರು ಮಹಿಳೆಯರು ಮತ್ತು ಒಬ್ಬ ಪುರಷ ಸಾವನ್ನಪ್ಪಿದ್ದು ವಿವಿಧ ಆಸ್ಪತ್ರೆಗಳಲ್ಲಿ ಗಾಯಾಳುಗಳಿಗೆ ಚಿಕಿತ್ಸೆ ಕೊಡಲಾಗುತ್ತಿದೆ. ರಜನಿ , ಲಾವಣ್ಯ ಶಾಂತಿ, ಮಲ್ಲಿಕಾ ಮೃತ ಮಹಿಳೆಯರು ಅಂತ ತಿಳಿದು ಬಂದಿದೆ.
PublicNext
09/01/2025 09:35 am