ಹುಬ್ಬಳ್ಳಿ : ಶಾಂತಿಯುತ ಬಂದ್ ಗೆ ಈಗಾಗಲೇ ಸಾಕಷ್ಟು ನಿರ್ದೇಶನ ನೀಡಲಾಗಿದೆ. ಬಲವಂತವಾಗಿ ಬಂದ್ ಮಾಡುವುದು, ನಿಯಮ ಉಲ್ಲಂಘನೆ ಮಾಡುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮಗಳನ್ನು ಜರುಗಿಸುವುದಾಗಿ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಸೂಚನೆ ನೀಡಿದರು.
ಪಬ್ಲಿಕ್ ನೆಕ್ಸ್ಟ್ ಜೊತೆಗೆ ಮಾತನಾಡಿದ ಅವರು, ಈಗಾಗಲೇ ಸಾಕಷ್ಟು ಬಿಗಿ ಬಂದೋಬಸ್ತ್ ನಿಯೋಜನೆ ಮಾಡಿದ್ದು, 2000 ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗಿದೆ. ಅಲ್ಲದೇ ಶಾಂತಿಯುತವಾಗಿ ಯಾವುದೇ ರೀತಿಯಲ್ಲಿ ಬಂದ್ ಮಾಡಬೇಕು. ಅದನ್ನು ಬಿಟ್ಟು ಬಲವಂತವಾಗಿ ಬಂದ್ ಮಾಡುವುದು ಹಾಗೂ ಕಾನೂನು ನಿಯಮ ಉಲ್ಲಂಘನೆ ಮಾಡುವವರ ವಿರುದ್ಧ ಕಾನೂನು ಕ್ರಮಗಳನ್ನು ಜರುಗಿಸಲಾಗುತ್ತದೆ ಎಂದರು.
ಈಗಾಗಲೇ ಸಾರಿಗೆ ವ್ಯವಸ್ಥೆಯಲ್ಲಿ ಸಿಟಿ ಹೊರ ವಲಯದಲ್ಲಿ ಕಾರ್ಯಾಚರಣೆ ನಡೆಸುತ್ತಿರುವ ಬಗ್ಗೆಯೂ ಅಧಿಕಾರಿಗಳು ಮಾಹಿತಿ ನೀಡಿದ್ದು, ಯಾವುದೇ ರೀತಿಯಲ್ಲಿ ಸಾರ್ವಜನಿಕರಿಗೆ ತೊಂದರೆ ಆಗದಂತೆ ಕ್ರಮ ವಹಿಸಲಾಗುತ್ತದೆ ಎಂದು ಅವರು ಸೂಚನೆ ನೀಡಿದರು.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
09/01/2025 10:19 am