ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕೊಡಗಿನ ಸರಕಾರಿ ಕಚೇರಿಗಳನ್ನು ಭ್ರಷ್ಟಾಚಾರ, ದಲ್ಲಾಳಿ ಮುಕ್ತಗೊಳಿಸಿ

ಮಡಿಕೇರಿ : ಕೊಡಗು ಜಿಲ್ಲೆಯ ಸರಕಾರಿ ಕಚೇರಿಗಳನ್ನು ಭ್ರಷ್ಟಾಚಾರ ಮತ್ತು ದಲ್ಲಾಳಿ ಮುಕ್ತಗೊಳಿಸಬೇಕೆಂದು ಕೊಡಗು ಜಿಲ್ಲಾ ಸಾರ್ವಜನಿಕ ಹಿತರಕ್ಷಣಾ ಸಮಿತಿ ಒತ್ತಾಯಿಸಿದೆ.

ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಮಿತಿಯ ಅಧ್ಯಕ್ಷ ಎ.ಎಸ್.ಕಟ್ಟಿ ಮಂದಯ್ಯ ಅವರು ಜಿಲ್ಲೆಯ ಕಂದಾಯ ಮತ್ತು ಭೂದಾಖಲೆಗಳ ಇಲಾಖೆಯಲ್ಲಿ ಅರ್ಜಿದಾರರಿಗೆ ಹೆಚ್ಚಾಗಿ ಸಮಸ್ಯೆ ಎದುರಾಗುತ್ತಿದೆ. ಇದರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಎ.ಎಸ್.ಪೊನ್ನಣ್ಣ ಹಾಗೂ ಐದು ತಾಲ್ಲೂಕುಗಳ ತಹಶೀಲ್ದಾರರಿಗೆ ಮನವಿ ಸಲ್ಲಿಸಿರುವುದಾಗಿ ತಿಳಿಸಿದರು.

ಭ್ರಷ್ಟಾಚಾರ ಎನ್ನುವುದು ಭಯೋತ್ಪಾದನೆಗಿಂತ ಅಪಾಯಕಾರಿಯಾಗಿದೆ, ಇಂದು ಜಿಲ್ಲೆಯ ಸರಕಾರಿ ಕಚೇರಿಗಳಲ್ಲಿ ಮಧ್ಯವರ್ತಿಗಳ ಮೂಲಕ ಭ್ರಷ್ಟಾಚಾರ ವ್ಯಾಪಕವಾಗಿ ನಡೆಯುತ್ತಿದೆ. ಅರ್ಜಿದಾರರು ನೀಡುವ ಹಣದಲ್ಲಿ ಅರ್ಧಭಾಗ ದಲ್ಲಾಳಿಗಳಿಗೆ, ಉಳಿದ ಅರ್ಧಭಾಗ ಅಧಿಕಾರಿಗಳಿಗೆ ಎಂದು ಹಂಚಿಕೆಯಾಗುತ್ತಿದೆ. ಈ ಹಿಂದೆ ಭಾರತೀಯ ಪ್ರಜೆಗಳು ಬ್ರಿಟಿಷರ ಗುಲಾಮರಾಗಿ ಸಂಕಷ್ಟದ ಜೀವನ ನಡೆಸಬೇಕಾಗಿತ್ತು. ಆದರೆ ಇಂದು ಅಧಿಕಾರಿಗಳ ಗುಲಾಮರಾಗುವ ದುಸ್ಥಿತಿ ಬಂದೊದಗಿದೆ ಎಂದು ಆರೋಪಿಸಿದರು.

Edited By : PublicNext Desk
Kshetra Samachara

Kshetra Samachara

09/01/2025 10:22 am

Cinque Terre

540

Cinque Terre

0

ಸಂಬಂಧಿತ ಸುದ್ದಿ