ಕೊಡಗು : ಮಾಜಿ ಮುಖ್ಯಮಂತ್ರಿ ವಿರೇಂದ್ರ ಪಾಟೀಲ್ ಜನ್ಮ ಶತಮಾನೋತ್ಸವ ಹಾಗೂ ಮಾಜಿ ಮುಖ್ಯಮಂತ್ರಿ ಗುಂಡೂರಾವ್ ರವರ ನುಡಿ ನಮನ ಕಾರ್ಯಕ್ರಮವು ಕುಶಾಲನಗರದಲ್ಲಿ ನಡೆಯತ್ತಿದ್ದು ಈ ಕಾರ್ಯಕ್ರಮಕ್ಕೆ ಆಗಮಿಸುವಂತೆ ಕೋರಿ ಕನ್ನಡ ಸಿರಿ ಸ್ನೇಹ ಬಳಗ ವತಿಯಿಂದ ಶಾಸಕರ ನೇತೃತ್ವದಲ್ಲಿ ಗಣ್ಯ ಅಥಿಗಳನ್ನ ಕಾರ್ಯಕ್ರಮಕ್ಕೆ ಸಮಿತಿ ಪ್ರಮುಖರು ಆಹ್ವಾನಿಸುತ್ತಿದ್ದಾರೆ.
ಅದರಂತೆ ಇಂದು ಸಮಿತಿ ಬೆಂಗಳೂರಿಗೆ ತೆರಳಿದ್ದು ಕನ್ನಡ ಸಿರಿ ಸ್ನೇಹ ಬಳಗ ಶಾಸಕ ಡಾ.ಮಂತರ್ ಗೌಡ ಅವರ ನೇತೃತ್ವದಲ್ಲಿ ಕರ್ನಾಟಕ ರಾಜ್ಯ ಸರ್ಕಾರದ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ರವರನ್ನು ಭೇಟಿ ಮಾಡಿ ಕುಶಾಲನಗರದಲ್ಲಿ ನಡೆಯುತ್ತಿರುವ ಕಾರ್ಯಕ್ರಮಕ್ಕೆ ಆಹ್ವಾನಿ ಕಾರ್ಯಕ್ರಮಕ್ಕೆ ಬರುವಂತೆ ಮನವಿ ಮಾಡಿದ್ದಾರೆ.
ಈ ಸಂಧರ್ಭದಲ್ಲಿಸಂಸ್ಥೆಯ ಅಧ್ಯಕ್ಷ ಲೋಕೇಶ್ ಸಾಗರ್, ನಾಗರಾಜ ಶೆಟ್ಟಿ ಸೇರಿದಂತೆ ಪದಾಧಿಕಾರಿಗಳು ಇದ್ದರು.
Kshetra Samachara
09/01/2025 10:23 am