ಹುಬ್ಬಳ್ಳಿ : ದಲಿತಪರ ಸಂಘಟನೆಗಳಿಂದ ಹುಬ್ಬಳ್ಳಿ-ಧಾರವಾಡ ಬಂದ್ ಕರೆ ನೀಡಲಾಗಿದ್ದು, ಈ ನಿಟ್ಟಿನಲ್ಲಿ ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮಿಷನರೇಟ್ ನಿಂದ ಸಾಕಷ್ಟು ಬಿಗಿ ಬಂದೋಬಸ್ತ್ ನಿಯೋಜನೆ ಮಾಡಲಾಗಿದ್ದು, ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಹಾಗೂ ಡಿಸಿಪಿಗಳಾದ ರವೀಶ್ ಹಾಗೂ ಮಹಾನಿಂಗ ನಂದಗಾವಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ರಾತ್ರಿಯಿಂದಲೂ ಅಧಿಕಾರಿ ಸಿಬ್ಬಂದಿ ಬಂದೋಬಸ್ತ್ ನಲ್ಲಿದ್ದಾರೆ. 2000ಕ್ಕೂ ಹೆಚ್ಚು ಪೊಲೀಸ್, ಹೋಂ ಗಾರ್ಡ್ಸ್ ಸಿಬ್ಬಂದಿ ನೇಮಕ ಮಾಡಲಾಗಿದೆ. ಈ ನಿಟ್ಟಿನಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಪೊಲೀಸ್ ಇಲಾಖೆಯಿಂದ ಬಿಗಿ ಬಂದೋಬಸ್ತ್ ನಿಯೋಜನೆ ಮಾಡಿದ್ದು, ಅಧಿಕಾರಿಗಳು ಪರಿಶೀಲನೆ ನಡೆಸಿದರು.
ಇನ್ನೂ ಹುಬ್ಬಳ್ಳಿಯ ಆಯಕಟ್ಟಿನ ಪ್ರದೇಶದಲ್ಲಿ ಭೇಟಿ ನೀಡಿ ಪರಿಶೀಲನೆ ನಡೆಸಿದ ಅಧಿಕಾರಿಗಳು, ಯಾವುದೇ ರೀತಿಯಲ್ಲಿ ಸಾರ್ವಜನಿಕರಿಗೆ ಸಮಸ್ಯೆಯಾಗದಂತೆ ಸೂಚನೆ ನೀಡಿದ್ದು, ಶಾಂತಿಯುತ ಬಂದ್ ಆಚರಣೆಗೆ ಸಲಹೆ ನೀಡಿದರು.
Kshetra Samachara
09/01/2025 10:52 am