ಬೈಂದೂರು: ಗಂಗೊಳ್ಳಿ ಸಮೀಪದ ಲೈಟ್ ಹೌಸ್ ಸಮುದ್ರದಲ್ಲಿ ಸರ್ವಮಂಗಳ ಬೋಟಿನಲ್ಲಿ ಕಳೆದ ಆರು ದಿನಗಳ ಹಿಂದೆ ಮೀನುಗಾರಿಕೆಗೆ ತೆರಳಿದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ಕಡಲಿಗೆ ಬಿದ್ದು ನಾಪತ್ತೆಯಾದ ನಾರಾಯಣ ಮೊಗವೀರ (58) ಎನ್ನುವರ ಯಾವುದೇ ಸುಳಿವು ಸಿಕ್ಕಿಲ್ಲ. ನಾರಾಯಣ ಮೊಗವೀರರ ಮನೆಯಲ್ಲಿ ಆಕ್ರಂದನ ಮುಗಿಲು ಮುಟ್ಟಿದೆ, ಇಲ್ಲಿಯ ತನಕ ಸಂತ್ರಸ್ತರ ನೆರವಿಗೆ ಯಾವುದೇ ಅಧಿಕಾರಿಗಳು, ಜನಪ್ರತಿನಿಧಿಗಳು ಮನೆಗೆ ಭೇಟಿ ನೀಡದೆ ಇರುವ ಬಗ್ಗೆ ಸಾರ್ವಜನಿಕ ವಲಯದಲ್ಲಿ ಆಕ್ರೋಶ !!
ಶ್ರೀಮಂತರ ಮನೆಯಲ್ಲಿ ಸಣ್ಣ ಘಟನೆಗಳು ನಡೆದರು ಅಧಿಕಾರಿಗಳು ಜನಪ್ರತಿನಿಧಿಗಳು ಭೇಟಿ ನೀಡುತ್ತಾರೆ, ಆದರೆ ಬಡ ಕುಟುಂಬದ ಮೀನುಗಾರರ ಮನೆಗೆ ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಮಾತನಾಡುವವರು ಯಾರು ಇಲ್ಲವೇ?? ಎಂಬ ಯಕ್ಷಪ್ರಶ್ನೆ.
ಮೀನುಗಾರರು ಹಾಗೂ ಗಂಗೊಳ್ಳಿಯ ಪರ್ಶಿನ್ ಬೋಟ್‌ಗಳು, ಕರಾವಳಿ ಕಾವಲು ಪಡೆ ಪೊಲೀಸರು, ಗಂಗೊಳ್ಳಿ ಠಾಣಾ ಪೊಲೀಸರು, ಮುಳುಗು ತಜ್ಞ ದಿನೇಶ್ ಖಾರ್ವಿ ಮತ್ತು ಇತರರು ನಿರಂತರ ಹುಡುಕಾಟ ನಡೆಸಿದರೂ ಯಾವುದೇ ಪ್ರಯೋಜನವಾಗಿಲ್ಲ.
ಇವರ ಬಗ್ಗೆ ಏನಾದರೂ ಸುಳಿವು ಸಿಕ್ಕಿದರೆ ತತ್‌ಕ್ಷಣ ಗಂಗೊಳ್ಳಿ ಪೊಲೀಸರು, ಕರಾವಳಿ ಕಾವಲು ಪಡೆ ಪೊಲೀಸರಿಗೆ ಮಾಹಿತಿ ನೀಡಬೇಕಾಗಿ ಮನೆಯವರು ಮನವಿ ಮಾಡಿಕೊಂಡಿದ್ದಾರೆ.
Kshetra Samachara
09/01/2025 11:07 am