ಹುಬ್ಬಳ್ಳಿ : ಕೇಂದ್ರ ಸಚಿವ ಅಮಿತ್ ಶಾ ಹೇಳಿಕೆಯನ್ನು ಖಂಡಿಸಿ ಹುಬ್ಬಳ್ಳಿ ಧಾರವಾಡ ಅವಳಿನಗರದ ಬಂದ್ ಗೆ ದಲಿತ ಸಂಘಟನೆಗಳು ಕರೆ ನೀಡಿದ್ದು, ಈ ಹಿನ್ನೆಲೆಯಲ್ಲಿ ಶಾಸಕ ಪ್ರಸಾದ್ ಅಬ್ಬಯ್ಯ ಚನ್ನಮ್ಮ ವೃತ್ತಕ್ಕೆ ಹಾಗೂ ಪ್ರತಿಭಟನೆ ನಡೆಯುತ್ತಿರುವ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಕ್ಷಣದಿಂದ ಕ್ಷಣಕ್ಕೆ ಹುಬ್ಬಳ್ಳಿ ಧಾರವಾಡ ಬಂದ್ ಹೋರಾಟ ಹುಬ್ಬಳ್ಳಿಯಲ್ಲಿ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು,ಹುಬ್ಬಳ್ಳಿಯ ಕಾರವಾರ ರಸ್ತೆ, ಚೆನ್ನಮ್ಮ ವೃತ್ತದ ಬಳಿಯಲ್ಲಿ ಹಲವಾರು ಸಂಘಟನೆಗಳು ಬಂದ್ ಗೆ ಬೆಂಬಲ ನೀಡಿವೆ, ಈ ಹಿನ್ನೆಲೆಯಲ್ಲಿ ಸರ್ಕಲ್ ಗೆ ಶಾಸಕ ಪ್ರಸಾದ್ ಅಬ್ಬಯ್ಯ ಭೇಟಿ ನೀಡಿ ಶಾಂತಿಯುತ ರೀತಿಯಲ್ಲಿ ಬಂದ್ ಮಾಡುವಂತೆ ಮನವಿ ಮಾಡಿದರು.
ಇನ್ನೂ ಬಂದ ಹಿನ್ನಲೆಯಲ್ಲಿ ವಾಹನಗಳ ಟೈಯರ್ ಗಾಳಿಯನ್ನು ಬಿಡುವ ಮೂಲಕ ವಾಹನ ಸವಾರರಿಗೆ ಎಚ್ಚರಿಕೆ ನೀಡಿದ್ದು, ಈ ಬಗ್ಗೆ ಪೊಲೀಸ್ ಆಯುಕ್ತರ ಜೊತೆಗೆ ಚರ್ಚಿಸಿ ಮಾಹಿತಿ ಪಡೆದುಕೊಂಡರು.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
09/01/2025 11:40 am