ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಬಂದ್ ಕಾವು ಸಮಯ ಕಳೆದಂತೆ ತೀವ್ರ ಸ್ವರೂಪ ಪಡೆಯುತ್ತಿದೆ. ಹುಬ್ಬಳ್ಳಿಯ ಚೆನ್ನಮ್ಮ ಸರ್ಕಲ್ ಬಳಿ ಅಮಿತ್ ಶಾ ಭಾವಚಿತ್ರಕ್ಕೆ ಬೆಂಕಿ ಇಟ್ಟು ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾಕಾರರು ವಿನೂತನ ರೀತಿಯಲ್ಲಿ ಹೋರಾಟಗಳನ್ನು ನಡೆಸುತ್ತಿದ್ದಾರೆ.
ಈಗಾಗಲೇ ಕೊಪ್ಪೀಕರ್ ರಸ್ತೆ, ಹಳೆ ಹುಬ್ಬಳ್ಳಿ, ನ್ಯೂ ಇಂಗ್ಲೀಷ್ ಸ್ಕೂಲ್ ಸೇರಿದಂತೆ ಮುಂತಾದ ಕಡೆಗಳಲ್ಲಿನ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿಸಿದ ಕಾರ್ಯಕರ್ತರು ಹುಬ್ಬಳ್ಳಿಯನ್ನು ಬಂದ್ ಮಾಡಿ ಹೋರಾಟ ನಡೆಸುತ್ತಿದ್ದಾರೆ. ತಂಡೋಪ ತಂಡವಾಗಿ ಪ್ರತಿಭಟನೆ ರ್‍ಯಾಲಿ ಮೂಲಕ ಆಗಮಿಸುವ ಪ್ರತಿಭಟನಾಕಾರರು ಅಮಿತ್ ಶಾ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಹುಬ್ಬಳ್ಳಿಯ ಹೃದಯ ಭಾಗವಾಗಿರುವ ಚೆನ್ನಮ್ಮ ವೃತ್ತದಲ್ಲಿ ಅಮಿತ್ ಶಾ ವಿರುದ್ಧದ ಹೋರಾಟದ ಕಾವು ಏರುತ್ತಲೇ ಇದೆ.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
09/01/2025 12:01 pm