ಬೆಂಗಳೂರು: ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಆಶಾ ಕಾರ್ಯಕರ್ತೆಯರನ್ನು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಭೇಟಿ ಮಾಡಿ, ಪ್ರತಿಭಟನೆ ಕೈಬಿಡುವಂತೆ ಮನವಿ ಮಾಡಿದರು. ಮುಂಬರುವ ಬೆಜೆಟ್‌ನಲ್ಲಿ ಆಶಾ ಕಾರ್ಯಕರ್ತೆಯರ ಗೌರವಧನ ಹೆಚ್ಚಿಸುವ ಬಗ್ಗೆ ಸಿಎಂ ಜೊತೆ ಚರ್ಚಿಸುವುದಾಗಿ ಸಚಿವರು ಭರವಸೆ ನೀಡಿದ್ದಾರೆ.
ಆಶಾ ಕಾರ್ಯಕರ್ತೆಯರಿಗೆ ಪ್ರಸ್ತುತ ನೀಡುತ್ತಿರುವ 8 ಸಾವಿರ ರೂಪಾಯಿ ಖಚಿತ ಗೌರವಧನ ಬದಲಾಗಿ 9500 ರೂಪಾಯಿಗಳನ್ನು ಮುಂಗಡವಾಗಿ ನೀಡಲು ಸರ್ಕಾರ ಸಿದ್ಧ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಪ್ರತಿಭಟನೆ ಕೈ ಬಿಟ್ಟು ಆರೋಗ್ಯ ಸೇವೆ ಒದಗಿಸುವ ನಿಟ್ಟಿನಲ್ಲಿ ಸಹಕಾರ ನೀಡುವಂತೆ ಆಶಾ ಕಾರ್ಯಕರ್ತೆಯರಲ್ಲಿ ಸಚಿವರು ಮನವಿ ಮಾಡಿದರು.
PublicNext
09/01/2025 12:31 pm