ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಳೆ ಹಾನಿ ಪರಿಶೀಲನೆ ಮಾಡಬೇಕೆಂದು ರೈತರಿಂದ ಪ್ರತಿಭಟನೆ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆ ಶಾಶ್ವತ ಬರಪೀಡಿತ ಪ್ರದೇಶವಾಗಿದ್ದು ರೈತಾಪಿ ಸಮುದಾಯ ಪ್ರತಿ ವರ್ಷ ನಷ್ಟ ಅನುಭವಿಸುತ್ತಿದ್ದಾರೆ. ಒಮ್ಮೆ ಅತಿವೃಷ್ಟಿ ಮತ್ತೊಮ್ಮೆ ಅನಾವೃಷ್ಠಿ ಇಲ್ಲಿ ಮಾಮೂಲಾಗಿದೆ, ಹವಾಮಾನ ವೈಪರಿತ್ಯಗಳು ರೈತರ ಬದುಕಿನ ಮೇಲೆ ಹೆಚ್ಚು ಪರಿಣಾಮ ಬಿರುತ್ತವೆ. ಹಾಗಾಗಿ ಸೂಕ್ತ ಪರಿಹಾರ ಒದಗಿಸಬೇಕಿದೆ ಎಂದು ಕರ್ನಾಟ ರಾಜ್ಯ ರೈತ ಸಂಘದ ವತಿಯಿಂದ ಪ್ರತಿಭಟನೆ ನಡೆಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಬಳಿ ಕರ್ನಾಟಕ ರಾಜ್ಯ ರೈತ ಸಂಘದ ವತಿಯಿಂದ ಜಿಲ್ಲಾಧಿಕಾರಿಗೆ ಬೆಳೆ ಹಾನಿ ಪರಿಶೀಲನೆ ನಡೆಸಬೇಕೆಂದು ಮನವಿ ಮಾಡಿದರು.

ಜಿಲ್ಲೆಯಲ್ಲಿನ ಬೆಳೆ ಹಾನಿ ಪರಿಶೀಲನೆ ಹಾಗೂ ನಷ್ಟ ಅಂದಾಜಿಸಿ ಪರಿಹಾರ ನೀಡುವ ನಿಟ್ಟಿನಲ್ಲಿ ಜಿಲ್ಲಾ ಮಟ್ಟದಲ್ಲಿ ಶಾಶ್ವತ ಕೋಶವೊಂದನ್ನು ರಚಿಸುವ ತುರ್ತು ಅಗತ್ಯವಿದೆ. ಈ ಕೋಶದಲ್ಲಿ ಕಂದಾಯ, ಕೃಷಿ, ತೋಟಗಾರಿಕೆ, ವಿಮಾ 'ಕಂಪನಿ ಅಧಿಕಾರಿಗಳು ಇರಬೇಕು. ಇದಕ್ಕಾಗಿ ಪ್ರತ್ಯೇಕ ಕಚೇರಿ ತೆರೆದು ಮುಂಗಾರು ಹಿಂಗಾರು ಹಂಗಾಮಿನಲ್ಲಿ ಅತಿವೃಷ್ಟಿ ಇಲ್ಲವೇ ಅನಾವೃಷ್ಟಿ ಆದಾಗ ಕೋಶವು ಕಾರ್ಯ ಪಡೆ ರೀತಿಯಲ್ಲಿ ಕಾರ್ಯನಿರ್ವಹಿಸಬೇಕು. ರೈತರಿಂದ ಬಂದ ದೂರುಗಳ ಆಲಿಸಿ ತಕ್ಷಣ ಫೀಲ್ಡ್ ಗೆ ಹೊಗಬೇಕು ಅಧಿಕಾರಿಗಳಿಗೆ ತಿಳಿಸಿದರು.

ಜಿಲ್ಲೆಯಲ್ಲಿ ಈ ವರ್ಷ ಮಳೆ ಜಾಸ್ತಿಯಾಗಿ ಈರುಳ್ಳಿ ಕೊಳೆತು ಹೋಗಿದೆ. ಈರುಳ್ಳಿ ಬೆಳೆ ನಾಶವ ಖುದ್ದು ಪರಿಶೀಲಿಸಲು ಕಂದಾಯ ಸಚಿವ ಕೃಷ್ಣ ಭೈರೇಗೌಡ ಆಗಮಸಿದ್ದರು. ಅಲ್ಲದೇ ಕಳಪೆ ಬಿತ್ತನೆ ಬೀಜ ವಿತರಣೆಯಿಂದಾಗಿ ಸಾವಿರಾರು ಎಕರೆಯಲ್ಲಿ ಬಿತ್ತನೆ ಮಾಡಲಾದ ತೊಗರಿ ಹೂ ಬಿಟ್ಟು ಕಾಯಿ ಕಟ್ಟದೆ ಹಾಗೆ ಉಳಿದಿದೆ. ಪರಿಣಾಮ ರೈತ ನಷ್ಟ ಅನುಭವಿಸುವಂತಾಗಿದೆ.

ಬೆಳೆ ನಷ್ಟ ಪರಿಹಾರ ವಿತರಣೆ ಸಂಬಂಧ ರೈತ ಸಂಘಟನೆಗಳು ಈಗಾಗಲೇ ಹಲವು ಬಾರಿ ಜಿಲ್ಲಾಡಳಿತಕ್ಕೆ ಮನವಿ ಮಾಡಿದೆ. ಪರಿಹಾರ ವಿತರಣೆಯಲ್ಲಿನ ತಾಂತ್ರಿಕ ಲೋಪ ಹಾಗೂ ತಪ್ಪು ನಡೆಯಿಂದಾಗಿ ಬಹಳಷ್ಟು ರೈತರಿಗೆ ಪರಿಹಾರ ವಿತರಣೆಯಾಗಿಲ್ಲ. ರೈತರು ನಿತ್ಯ ಬ್ಯಾಂಕ್ ಖಾತೆ ಪರಿಶೀಲಿಸಿ ಸುಸ್ತಾಗಿದ್ದಾರೆ. ಅಧಿಕಾರಿಗಳ ಮಟ್ಟದಲ್ಲಿ ಆದ ಲೋಪದಿಂದಾಗಿ ಪರಿಹಾರ ವಿತರಣೆಯಾಗಿಲ್ಲ. ಜಿಲ್ಲಾಡಳಿತ ತಕ್ಷಣವೇ ಬೆಳೆ ನಷ್ಟದ ಬಗ್ಗೆ ಪುನರ್ ಪರಿಶೀಲಿಸಿ ತಕ್ಷಣವೇ ಪರಿಹಾರ ವಿತರಿಸಬೇಕೆಂದು ಆಗ್ರಹಿಸಿದರು.

Edited By : PublicNext Desk
Kshetra Samachara

Kshetra Samachara

09/01/2025 12:41 pm

Cinque Terre

660

Cinque Terre

0

ಸಂಬಂಧಿತ ಸುದ್ದಿ