ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೈಂದೂರು: ನಾಗೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ, ಇಬ್ಬರಿಗೆ ಗಂಭೀರ ಗಾಯ

ಬೈಂದೂರು: ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿಯಾಗಿ ಇಬ್ಬರು ಗಂಭೀರ ಗಾಯಗೊಂಡ ಘಟನೆ ಉಡುಪಿ ಜಿಲ್ಲೆಯ ಬೈಂದೂರು ರಾಷ್ಟ್ರೀಯ ಹೆದ್ದಾರಿ ನಾಗೂರು ಸಮೀಪ ಸಂಭವಿಸಿದೆ.ಬೈಂದೂರಿನಿಂದ ಕುಂದಾಪುರ ಕಡೆಗೆ ಸಾಗುತ್ತಿದ್ದ ಕಾರು ನಾಗೂರು ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ.

ಈ ವೇಳೆ ಕಾರಿನಲ್ಲಿದ್ದ ಇದ್ದರು ಗಂಭೀರ ಗಾಯಗೊಂಡಿದ್ದು ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು.ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಮೂವರು ಕೇರಳ ಮೂಲದವರು ಎಂದು ತಿಳಿದು ಬಂದಿದೆ. ಘಟನಾ ಸ್ಥಳಕ್ಕೆ ಬೈಂದೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಘಟನಾ ಸ್ಥಳದಲ್ಲಿ ಕೆಲಹೊತ್ತು ಟ್ರಾಫಿಕ್ ಜಾಮ್ ಉಂಟಾಯಿತು.

Edited By : Suman K
PublicNext

PublicNext

09/01/2025 01:11 pm

Cinque Terre

35.16 K

Cinque Terre

0

ಸಂಬಂಧಿತ ಸುದ್ದಿ