ಹುಬ್ಬಳ್ಳಿ: ಸಚಿವ ಅಮಿತ್ ಶಾ ಹೇಳಿಕೆ ಖಂಡಿಸಿ ಕರೆ ನೀಡಿರುವ ಹುಬ್ಬಳ್ಳಿ ಬಂದ್ ಹಿನ್ನೆಲೆಯಲ್ಲಿ ಹಳೇ ಹುಬ್ಬಳ್ಳಿಯ ಇಂಡಿ ಪಂಪ್ ಬಳಿಯಲ್ಲಿ ಟೈಯರ್ ಗೆ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸುವ ಮೂಲಕ ಕೇಂದ್ರ ಸಚಿವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ವಿವಿಧ ದಲಿತ ಸಂಘಟನೆಗಳ ನೇತೃತ್ವದಲ್ಲಿ ಇಂಡಿ ಪಂಪ್ ಸರ್ಕಲ್ ಬಳಿಯಲ್ಲಿ ಬೃಹತ್ ಪ್ರತಿಭಟನೆ ನಡೆಸುವ ಮೂಲಕ ಕೇಂದ್ರ ಸಚಿವ ಅಮಿತ್ ಶಾ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಕೂಡಲೇ ಅಮಿತ್ ಶಾ ಅವರನ್ನು ಕೇಂದ್ರ ಸಚಿವ ಸಂಪುಟದಿಂದ ವಜಾ ಮಾಡಬೇಕು. ಅಲ್ಲದೇ ಅಮಿತ್ ಶಾ ಅವರು ಬಹಿರಂಗವಾಗಿ ಅಂಬೇಡ್ಕರ್ ಅವರಿಗೆ ಕ್ಷಮೆಯಾಚನೆ ಮಾಡಬೇಕು ಎಂದು ವಿನೂತನ ರೀತಿಯಲ್ಲಿ ಪ್ರತಿಭಟನೆ ನಡೆಸಿದರು.
ಇನ್ನೂ ರಸ್ತೆಯಲ್ಲಿ ಟೈಯರ್ ಗೆ ಬೆಂಕಿ ಹಚ್ಚಿ ಘೋಷಣೆ ಕೂಗಿ ಪ್ರತಿಭಟನೆ ನಡೆಸಿದರು. ಕೂಡಲೇ ಎಚ್ಚೆತ್ತುಕೊಳ್ಳದಿದ್ರೆ ಉಗ್ರ ಹೋರಾಟದ ಎಚ್ಚರಿಕೆ ನೀಡಿದರು.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
09/01/2025 01:33 pm