ಧಾರವಾಡ: ಹುಬ್ಬಳ್ಳಿ, ಧಾರವಾಡ ಬಂದ್‌ಗೆ ಬೆಂಬಲ ನೀಡುವಂತೆ ಆಗ್ರಹಿಸಿ ದಲಿತಪರ ಸಂಘಟನೆಗಳ ಮುಖಂಡರು ಘೋಷಣೆ ಕೂಗುತ್ತ ಧಾರವಾಡ ಜಿಲ್ಲಾ ನ್ಯಾಯಾಲಯಕ್ಕೆ ಬಂದು ಅಲ್ಲಿ ಪ್ರತಿಭಟನೆ ನಡೆಸುವ ಮೂಲಕ ಬಂದ್‌ಗೆ ವಕೀಲರು ಬೆಂಬಲ ಸೂಚಿಸುವಂತೆ ಆಗ್ರಹಿಸಿದರು.
ಧಾರವಾಡ ಜಿಲ್ಲಾ ನ್ಯಾಯಾಲಯ ಮುಖ್ಯದ್ವಾರದ ಬಳಿಯೇ ಪ್ರತಿಭಟನಾಕಾರರು ಕುಳಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಧಿಕ್ಕಾರ ಕೂಗಿದರು.
ಈ ವೇಳೆ ಸ್ಥಳಕ್ಕೆ ಬಂದ ವಕೀಲರ ಸಂಘದ ಅಧ್ಯಕ್ಷ ಅಶೋಕ ಏಣಗಿ ಅವರು, ಈ ಬಂದ್‌ಗೆ ಈಗಾಗಲೇ ಬೆಂಬಲ ಸೂಚಿಸಿದ್ದೇವೆ. ಇದು ಕೋರ್ಟ್ ಆಗಿದ್ದರಿಂದ ಇಲ್ಲಿ ಪ್ರತಿಭಟನೆ ಮಾಡುವುದು ಬೇಡ ಎಂದು ಮನವಿ ಮಾಡಿದರು. ಈ ವೇಳೆ ಪ್ರತಿಭಟನಾಕಾರರು ಕೋರ್ಟ್ ಅಂಬೇಡ್ಕರ್ ಅವರನ್ನು ಬಿಟ್ಟು ಇಲ್ಲ. ನೀವು ಆ ರೀತಿ ಮಾತನಾಡಬೇಡಿ. ಪ್ರತಿಭಟನೆಗೆ ವಕೀಲರು ಬೆಂಬಲ ಸೂಚಿಸಲು ಹೇಳಿ ಎಂದು ಜಟಾಪಟಿ ನಡೆಸಿದರು. ನಂತರ ವಕೀಲರ ಸಂಘದ ಅಧ್ಯಕ್ಷರು ಪ್ರತಿಭಟನೆಗೆ ಬೆಂಬಲ ಸೂಚಿಸಿ ಎಲ್ಲ ವಕೀಲರು ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವಂತೆ ಮನವಿ ಮಾಡಿದರು.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
09/01/2025 01:39 pm