ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಡಿನ್ನರ್ ಮೀಟಿಂಗ್ ಮುಂದೂಡಿಕೆಗೆ ಅನೇಕ ಕಾರಣಗಳಿವೆ - ಡಾ. ಜಿ ಪರಮೇಶ್ವರ್

ಬೆಂಗಳೂರು: : ಡಿನ್ನರ್ ಮೀಟಿಂಗ್ ಮುಂದೂಡಿಕೆಗೆ ಬಿಜೆಪಿ ನಾಯಕರ ವ್ಯಂಗ್ಯಕ್ಕೆ ತಿರುಗೇಟು ನೀಡಿದ ಪರಮೇಶ್ವರ್ ಮೊದಲು ಅವರ ಪಕ್ಷದ್ದು ನೋಡಿಕೊಳ್ಳಲಿ ಎಂದರು. ನಮ್ಮ ಪಕ್ಷದಲ್ಲಿ ಯಾವ ಗೊಂದಲವೂ ಇಲ್ಲ. ಎಸ್‌ಸಿ, ಎಸ್‌ಟಿ ಸಮಾವೇಶದ ಕುರಿತು‌ ಕರೆದಿದ್ದ ಸಭೆ ಮುಂದೂಡಲು ಅನೇಕ ಕಾರಣಗಳಿವೆ ಎಂದರು.

ಬೆಂಗಳೂರಿನ ತಮ್ಮ ನಿವಾಸದಲ್ಲಿ ಮಾತನಾಡಿದ ಅವರು, ನಮ್ಮ ಸಭೆಗೆ ಎಐಸಿಸಿ ವರಿಷ್ಟರು ಭಾಗವಹಿಸುವುದಾಗಿ ತಿಳಿಸಿದ್ದರಿಂದ ಮುಂದೂಡಿಕೆ ಮಾಡಲಾಗಿದೆ ಅಷ್ಟೇ, ನಮ್ಮ ಪಕ್ಷದ ಪ್ರಧಾನ ಕಾರ್ಯದರ್ಶಿಗಳಾದ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್‌ಸಿಂಗ್ ಸುರ್ಜೇವಾಲಾ ಅವರೇ ನನ್ನ ಹತ್ತಿರ ಮಾತನಾಡಿದ್ದಾರೆ. ಗೌಪ್ಯ ಸಭೆ ಏನು ಇಲ್ಲ. ನಮ್ಮ ಸಮಸ್ಯೆಗಳನ್ನು ಚರ್ಚಿಸಬೇಕು ಅಂತ ಸಭೆ ಸೇರುತ್ತಿದ್ದೇವೆ. ಅದಕ್ಕೆ ನೀವೆ ಬನ್ನಿ ಎಂದು ಕರೆದಿದ್ದೇನೆ. ಅವರು ದಿನಾಂಕ ಸೂಚಿಸುವುದಾಗಿ ತಿಳಿಸಿದ್ದಾರೆ. ಅವರ ದಿನಾಂಕ ಕೊಟ್ಟ ಬಳಿಕ ಮತ್ತೆ ಸಭೆ ಮಾಡುತ್ತೇವೆ ಎಂದರು.

ಸಭೆಯ ಬಗ್ಗೆ ಕೆಲವರು ಆತಂಕಕ್ಕೆ ಒಳಗಾಗಿದ್ದಾರೆ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಯಾರು ಆತಂಕಕ್ಕೆ ಒಳಗಾಗಿದ್ದಾರೆ? ನನಗೆ ಗೊತ್ತಿರುವ ಹಾಗೇ ಯಾವ ಆತಂಕನೂ ಇಲ್ಲ. ಯಾರು ಆತಂಕ ಪಡುವ ಅಗತ್ಯತೆಯು ಇಲ್ಲ , ಪಕ್ಷದಿಂದ ಹೊರತಾಗಿ ಸಮಾವೇಶ ಮಾಡುತ್ತೇವೆ ಎಂದು ನಾನು ಎಲ್ಲೂ ಹೇಳಿಲ್ಲ. ನಾನಾ ವಿಶ್ಲೇಷಣೆಗಳಿಗೆ ಉತ್ತರಿಸಲು ಆಗುತ್ತದೆಯೇ? ಒಬ್ಬೊಬ್ಬರು ಒಂದೊಂದು ರೀತಿಯ ವಿಶ್ಲೇಷಣೆ ಮಾಡುವುದು ಸಹಜ. ಡಿ.ಕೆ.ಶಿವಕುಮಾರ್ ಅವರು ನನಗೆ ಆತಂಕವಿದೆ ಎಂದು ಎಲ್ಲಾದರು ಹೇಳಿದ್ದಾರೆಯೇ? ಸುಮ್ಮನೆ ಹೇಳುವುದು ಬೇಡ. ನಿನ್ನೆ ಇಡೀ ದಿನ ಅವರೊಂದಿಗೆ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದೇನೆ. ಪತ್ರಿಕಾಗೋಷ್ಟಿಯನ್ನು ನಡೆಸಿದ್ದೇವೆ ನಮ್ಮಲ್ಲಿ ಯಾವುದೇ ಗೊಂದಲಗಳಿಲ್ಲ ಎಂದು‌ ಸ್ಪಷ್ಟನೆ ನೀಡಿದರು.

Edited By : Manjunath H D
PublicNext

PublicNext

09/01/2025 02:21 pm

Cinque Terre

28.23 K

Cinque Terre

0

ಸಂಬಂಧಿತ ಸುದ್ದಿ