ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ವಕೀಲ ವೃತ್ತಿಗೆ ಗೌರವ ತಂದುಕೊಟ್ಟವರು ಅಂಬೇಡ್ಕರ್ - ಕಾಂಗ್ರೆಸ್ ಲೀಗಲ್ ಸೆಲ್‌ನಿಂದ ರಾಷ್ಟ್ರಪತಿಗೆ ಮನವಿ

ಹುಬ್ಬಳ್ಳಿ: ಸಂಸತ್ತಿನಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಅವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ ಸಚಿವ ಅಮಿತ್ ಅವರ ವಿರುದ್ಧ ಕಾನೂನು ಕ್ರಮಗಳನ್ನು ಜರುಗಿಸಬೇಕು ಹಾಗೂ ಕೂಡಲೇ ಸಚಿವ ಸಂಪುಟದಿಂದ ವಜಾ ಮಾಡುವಂತೆ ಆಗ್ರಹಿಸಿ ಕಾಂಗ್ರೆಸ್ ಲೀಗಲ್ ಸೆಲ್ ವತಿಯಿಂದ ತಹಶೀಲ್ದಾರರ ಮೂಲಕ ರಾಷ್ಟ್ರಪತಿಗೆ ಮನವಿ ಸಲ್ಲಿಸಿದರು.

ಹುಬ್ಬಳ್ಳಿ ಧಾರವಾಡ ಅವಳಿನಗರದ ಬಂದ್‌ಗೆ ಬೆಂಬಲ ಸೂಚಿಸಿದ ಅವರು, ಕೂಡಲೇ ಕಾನೂನು ರೀತಿಯಲ್ಲಿ ಕ್ರಮಗಳನ್ನು ಜರುಗಿಸಬೇಕು ಎಂದು ಒತ್ತಾಯಿಸಿದರು. ಕೇಂದ್ರ ಸಚಿವ ಅಮಿತ್ ಶಾ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದು, ವಕೀಲ ವೃತ್ತಿಗೆ ಗೌರವ ತಂದುಕೊಟ್ಟಿರುವ ಅಂಬೇಡ್ಕರ್ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವುದು ಸರಿಯಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

Edited By : Shivu K
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

09/01/2025 02:58 pm

Cinque Terre

71.3 K

Cinque Terre

7

ಸಂಬಂಧಿತ ಸುದ್ದಿ