ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಅಥಣಿ : ಕಬ್ಬು ಸಾಗಿಸುತ್ತಿದ್ದ ಟ್ರ್ಯಾಕ್ಟರ್ ಗೆ ಬೆಂಕಿ ; ಸುಟ್ಟು ಕರಕಲಾದ ಟ್ರ್ಯಾಕ್ಟರ್

ಅಥಣಿ : ಕಟಾವು ಮಾಡಿದ್ದ ಕಬ್ಬು ಸಾಗಿಸುತ್ತಿದ್ದ ಟ್ರ್ಯಾಕ್ಟರ್ ಗೆ ಬೆಂಕಿ ತಗುಲಿದ್ದು, ಲಕ್ಷಾಂತರ ಮೌಲ್ಯದ ಟ್ರ್ಯಾಕ್ಟರ್ ಹಾಗೂ ಟ್ರೈಲರ್ ಸಂಪೂರ್ಣವಾಗಿ ಸುಟ್ಟಿರಿವ ಘಟನೆ ಅಥಣಿ ತಾಲೂಕಿನ‌ ನದಿ ಇಂಗಳಗಾಂವ ಗ್ರಾಮದಲ್ಲಿ ನಡೆದಿದೆ.

ಬುಧವಾರ ಸಂಜೆ ಹೊಲದಲ್ಲಿ ಕಬ್ಬು ತುಂಬುವ ಸಂದರ್ಭದಲ್ಲಿ ಅಚಾನಕ್ಕಾಗಿ ಬೆಂಕಿ ತಗುಲಿದ್ದು ಟ್ರ್ಯಾಕ್ಟರ್ ಸಂಪೂರ್ಣ ಸುಟ್ಟು ಕರಕಲಾಗಿದೆ. ಸ್ಥಳದಲ್ಲಿದ್ದವರು ಬೆಂಕಿ ಆರಿಸಲು ಹರಸಾಹಸ ಪಟ್ಟರು ಸಾಧ್ಯವಾಗಿಲ್ಲ.‌

ಘಟನೆಯಿಂದ ಸುಮಾರು 6 ಲಕ್ಷಕ್ಕೂ ಅಧಿಕ ಮೌಲ್ಯದ ನಷ್ಟ ಸಂಭವಿಸಿದೆ. ಅಥಣಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

Edited By : Shivu K
PublicNext

PublicNext

09/01/2025 03:07 pm

Cinque Terre

29.83 K

Cinque Terre

0

ಸಂಬಂಧಿತ ಸುದ್ದಿ