ಧಾರವಾಡ: ಹುಬ್ಬಳ್ಳಿ, ಧಾರವಾಡ ಬಂದ್ ಹಿನ್ನೆಲೆಯಲ್ಲೂ ಎಂದಿನಂತೆ ಕೆಲಸ ನಿರ್ವಹಿಸುತ್ತಿದ್ದ ಧಾರವಾಡದ ಕೃಷಿ ವಿಶ್ವವಿದ್ಯಾಲಯಕ್ಕೆ ಬೈಕ್ ರ್‍ಯಾಲಿ ಮೂಲಕ ತೆರಳಿದ ದಲಿತ ಸಂಘಟನೆ ಕಾರ್ಯಕರ್ತರು ಹಾಗೂ ಮುಖಂಡರು ಕೃಷಿ ವಿಶ್ವವಿದ್ಯಾಲಯವನ್ನು ಒತ್ತಾಯಪೂರ್ವಕವಾಗಿ ಬಂದ್ ಮಾಡಿಸಿದ್ದಾರೆ.
ಕೃಷಿ ವಿಶ್ವವಿದ್ಯಾಲಯದ ಆಡಳಿತ ಮಂಡಳಿ ಕಚೇರಿ ಒಳ ಹೋದ ಪ್ರತಿಭಟನಾಕಾರರು, ಅಲ್ಲಿ ಅಧಿಕಾರಿಗಳೊಂದಿಗೆ ವಾಗ್ವಾದ ನಡೆಸಿದರು. ಅಲ್ಲದೇ ಅಂಬೇಡ್ಕರ್ ಅವರಿಗೆ ಕೃಷಿ ವಿಶ್ವವಿದ್ಯಾಲಯ ಅವಮಾನ ಮಾಡುತ್ತಿದೆ ಎಂದು ಕೃಷಿ ವಿಶ್ವವಿದ್ಯಾಲಯದ ವಿರುದ್ಧವೂ ಧಿಕ್ಕಾರ ಕೂಗಿದರು.
ಕೂಡಲೇ ಕೃಷಿ ವಿಶ್ವವಿದ್ಯಾಲಯ ಕೆಲಸವನ್ನು ಸ್ಥಗಿತಗೊಳಿಸಿ ಬಂದ್ ಮಾಡಬೇಕು ಎಂದು ಪ್ರತಿಭಟನಾಕಾರರು ಆಡಳಿತ ಮಂಡಳಿ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿ ಅಲ್ಲಿಂದ ತೆರಳಿದರು.
Kshetra Samachara
09/01/2025 03:39 pm