ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಿತ್ರದುರ್ಗ: ಕ್ಷಯ ರೋಗ ನಿಯಂತ್ರಣಕ್ಕೆ ಸಾರ್ವಜನಿಕರ ಸಹಕಾರ ಮುಖ್ಯ- ಆರೋಗ್ಯ ನೀರಿಕ್ಷಣಾಧಿಕಾರಿ  ಮಹೇಶ್

ಚಿತ್ರದುರ್ಗ: ಜಿಲ್ಲಾ ಪಂಚಾಯತ್ ಚಿತ್ರದುರ್ಗ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಹಾಯಕದಲ್ಲಿ ಚಿತ್ರದುರ್ಗ ತಾಲೂಕಿನ ಬೆಳಗಟ್ಟ  ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪಿಯ ಹೋ.ಚಿ. ಬೋರಯ್ಯ ಬಡಾವಣೆ ಗ್ರಾಮದ ನಿರಾಶ್ರಿತರ ಪರಿಹಾರ ಕೇಂದ್ರದ ಸಭಾಂಗಣದಲ್ಲಿ ಗುರುವಾರ ಕ್ಷಯ ಮುಕ್ತ 100 ದಿನಗಳ ಅಭಿಯಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಬೆಳಗಟ್ಟ ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯ  ನೀರಿಕ್ಷಣಾಧಿಕಾರಿ ಮಹೇಶ್ ಡಿ ಕಾರ್ಯಕ್ರಮ ಉದ್ದೇಶಿಸಿ  ಮಾತನಾಡಿ ಕ್ಷಯ ರೋಗವು ಭಾರತದ ಸಾರ್ವಜನಿಕ ಆರೋಗ್ಯಕ್ಕೆ ಅತಿ ದೊಡ್ಡ ತೊಂದರೆಗಳಲ್ಲಿ ಒಂದಾಗಿರುತ್ತದೆ.  ಪ್ರತಿ ವರ್ಷ ವಿಶ್ವದಲ್ಲೇ ಅತಿ ಹೆಚ್ಚು ಜನ ಕ್ಷಯರೋಗಕ್ಕೆ ತುತ್ತಾಗುತ್ತಾರೆ,   ಈ ಹಿನ್ನಲೆಯಲ್ಲಿ ಭಾರತವನ್ನು ಕ್ಷಯ ಮುಕ್ತಗೊಳಿಸಲು ಸಮುದಾಯವು ಒಗ್ಗುಡಿ ಸಹಕಾರದೊಂದಿಗೆ  ಕೆಲಸ ಮಾಡಬೇಕಾಗಿದೆ.  ಕ್ಷಯ ರೋಗವು ಮೈಕೋ ಬ್ಯಾಕ್ಟೀರಿಯಾ ಟ್ಯೂಬರ್ ಕ್ಯುಲೋಸಿಸ್ ಎಂಬ ಸೂಕ್ಷ್ಮ ರೋಗಾಣುವಿನಿಂದ ಬರುತ್ತದೆ,  ಕ್ಷಯರೋಗಿಯು ಕೆಮ್ಮಿದಾಗ ಅಥವಾ ಸೀನಿದಾಗ  ಹೊರಬರುವ ತುಂತುರು ರೋಗಾಣುಗಳು ಗಾಳಿಯ ಮೂಲಕ ಆರೋಗ್ಯವಂತ ವ್ಯಕ್ತಿಯ ಶ್ವಾಸಕೋಶ ಸೇರಿ ಸೋಂಕು ಉಂಟುಮಾಡುತ್ತದೆ , ಕ್ಷಯ ರೋಗಿಗಳು ಕೆಮ್ಮುವಾಗ ಹಾಗೂ ಸೇರುವಾಗ ಬಾಯಿ ಮತ್ತು ಮೂಗಿನ ಹತ್ತಿರ ಕರವಸ್ತ್ರ ಇಟ್ಟುಕೊಳ್ಳಬೇಕು, ರೋಗಿಯ ಕಫವನ್ನು ಮನಸ್ಸಿಗೆ ಬಂದ ಕಡೆ ಉಗಿಯಬಾರದು, ಕಫವನ್ನು ಡಬ್ಬಿಯಲ್ಲಿ ಶೇಖರಿಸಿ ಗುಂಡಿ ತೋಡಿ ಮುಚ್ಚಬೇಕು, ನವಜಾತ ಶಿಶುಗಳಿಗೆ ಬಿಸಿಜಿ ಲಸಿಕೆ ಹಾಕಿಸಬೇಕೆಂದರು.

ಜಿಲ್ಲಾ ಕ್ಷಯರೋಗ ಸಂಯೋಜಕರಾದ ಪೃಥ್ವಿರಾಜ್  ಮಾತನಾಡಿ ನಿಮ್ಮ ಮನೆಯಲ್ಲಿ ಹಾಗೂ ಸುತ್ತಮುತ್ತಲಿನವರಲ್ಲಿ ಟಿಬಿ ರೋಗದ ಲಕ್ಷಣಗಳು ಕಂಡುಬಂದಲ್ಲಿ  ಸಮೀಪದ   ಸರ್ಕಾರಿ ಆರೋಗ್ಯ ಕೇಂದ್ರಕ್ಕೆ ಪರೀಕ್ಷೆಗಾಗಿ ಕಳುಹಿಸಬೇಕು ಟಿಬಿ ರೋಗವನ್ನು ಬೇಗ ಪತ್ತೆ ಹಚ್ಚಿ ಪೌಷ್ಟಿಕ ಆಹಾರ ಸೇವಿಸಿ ಸಮಯಕ್ಕೆ ಸರಿಯಾಗಿ ಸೂಕ್ತ ಚಿಕಿತ್ಸೆ ಪಡೆದುಕೊಂಡು  ಕ್ಷಯಮುಕ್ತ ಭಾರತವಾಗಲು ಸಹಕರಿಸಿ ಎಂದರು. 

ಹಿರಿಯ ಚಿಕಿತ್ಸಾ ಮೇಲ್ವಿಚಾರಕ ಅಧಿಕಾರಿ ಮಹೇಂದ್ರ ಅವರು ಡಾಟ್ಸ್ ಚಿಕಿತ್ಸೆಯ ಬಗ್ಗೆ ಮಾಹಿತಿ ನೀಡಿದರು.  ಕಾರ್ಯಕ್ರಮದಲ್ಲಿ ನಿರಾಶ್ರಿತರ ಪರಿಹಾರ ಕೇಂದ್ರದ ಅಧಿಕಾರಗಳಾದ ಮಹಾದೇವಯ್ಯ, ಪಿ.ಹೆಚ್.ಸಿ.ಓ. ನಿರ್ಮಲಾ ಇತರರು ಉಪಸ್ಥಿತರಿದ್ದರು

Edited By : PublicNext Desk
Kshetra Samachara

Kshetra Samachara

09/01/2025 03:43 pm

Cinque Terre

860

Cinque Terre

0

ಸಂಬಂಧಿತ ಸುದ್ದಿ