ಹುಬ್ಬಳ್ಳಿ: ಸಚಿವ ಅಮಿತ್ ಶಾ ಹೇಳಿಕೆ ಖಂಡಿಸಿ ಕರೆ ನೀಡಿರುವ ಹುಬ್ಬಳ್ಳಿ ಬಂದ್ ಹಿನ್ನೆಲೆಯಲ್ಲಿ ಮಹಿಳೆಯರು ಕೂಡ ರಸ್ತೆಗೆ ಇಳಿದು ಕೇಂದ್ರ ಸಚಿವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ, ಪ್ರತಿಭಟನೆ ನಡೆಸಿದರು. ಅಂಬೇಡ್ಕರ್ ಭಾವಚಿತ್ರ ಹಾಗೂ ಮೂರ್ತಿ ಹಿಡಿದು ಪ್ರತಿಭಟನಾ ರ್‍ಯಾಲಿ ನಡೆಸಿದರು.
ವಿವಿಧ ದಲಿತ ಸಂಘಟನೆಗಳ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಸುವ ಮೂಲಕ ಕೇಂದ್ರ ಸಚಿವ ಅಮಿತ್ ಶಾ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಜಬ್ ತಕ್ ಸೂರಜ್ ಚಾಂದ್ ರಹೇಗಾ.. ಬಾಬಾ ಥೇರಾ ನಾಮ್ ರಹೇಗಾ ಎಂದು ಘೋಷಣೆ ಕೂಗಿ ಪ್ರತಿಭಟನೆ ನಡೆಸಿದರು.
ಇನ್ನೂ ಪ್ರತಿಭಟನೆಯಲ್ಲಿ ನೂರಾರು ಮಹಿಳೆಯರು ಭಾಗವಹಿಸಿದ್ದು, ಕೇಂದ್ರ ಸಚಿವ ಅಮಿತ್ ಶಾ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
Kshetra Samachara
09/01/2025 03:45 pm