ಹಾಸನ: ನಗರಸಭೆ ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಲೋಕಾ ಇನ್ಸ್ ಪೆಕ್ಟರ್ ಬಾಲು, ಶಿಲ್ಪಾ ನೇತೃತ್ವದಲ್ಲಿ ದಾಳಿ ನಡೆದಿದೆ.
ಹಾಸನಾಂಬ ಜಾತ್ರಾ ಮಹೋತ್ಸವ ವೇಳೆ ಸ್ವಚ್ಛತಾ ಟೆಂಡರ್ ಬಿಲ್ ನೀಡಲು ನಗರಸಭೆ ಪರಿಸರ ಇಂಜಿನಿಯರ್ ಕೆ.ಆರ್.ವೆಂಕಟೇಶ್ ಹಾಗೂ ಆಯುಕ್ತ ನರಸಿಂಹಮೂರ್ತಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. 10.50 ಲಕ್ಷ ರೂ. ಬಿಲ್ ಗೆ ಒಂದೂವರೆ ಲಕ್ಷ ರೂ.ಗೆ ಬೇಡಿಕೆ ಇಟ್ಟಿದ್ದರು.
ನಗರಸಭೆ ಕಚೇರಿಯಲ್ಲಿ ಲಂಚ ಪಡೆಯುತ್ತಿದ್ದಾಗಲೇ ಲೋಕಾ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಹಣದ ಸಮೇತ ಇಬ್ಬರನ್ನು ವಶಕ್ಕೆ ಪಡೆದಿರುವ ಅಧಿಕಾರಿಗಳು ವಿಚಾರಣೆಗೆ ಒಳಪಡಿಸಿದ್ದಾರೆ.
PublicNext
09/01/2025 04:07 pm