ಶಿವಮೊಗ್ಗ: ಬಹು ಅಂಗಾಗ ವೈಫಲ್ಯದಿಂದ ತ್ಯಾವರೆಕೊಪ್ಪದ ಹುಲಿ ಮತ್ತು ಸಿಂಹಧಾಮದ ಹುಲಿ ಅಂಜನಿ ಕಳೆದ ರಾತ್ರಿ ಮೃತಪಟ್ಟಿದೆ ಎಂದು ಮೃಗಾಲಯದ ಕಾರ್ಯನಿರ್ವಾಹಕ ನಿರ್ದೇಶಕ ಅಮರಾಕ್ಷರ ತಿಳಿಸಿದ್ದಾರೆ.
ಅಂಜನಿ ವಯೋ ಸಹಜ ಬಹು ಅಂಗಾಂಗ ವೈಫಲ್ಯದಿಂದ ಮೃತಪಟ್ಟಿದೆ ಎಂದು ವೈದ್ಯಾಧಿಕಾರಿಗಳು ತಿಳಿಸಿದ್ದಾರೆ. ಪಶುವೈದ್ಯಕೀಯ ಕಾಲೇಜಿನ ವೈದ್ಯಾಧಿಕಾರಿಗಳು ಅಂಜನಿಯ ಮರಣೋತ್ತರ ಪರೀಕ್ಷೆ ನಡೆಸಿದರು. ಹುಲಿಯ ಮೃತದೇಹದ ಅಂತ್ಯಕ್ರಿಯೆ ನಡೆಸಲಾಗಿದೆ. ಅಂಜನಿ ಸಾವಿನಿಂದ ಮೃಗಾಲಯದಲ್ಲಿ ಹೆಣ್ಣು ಹುಲಿಗಳ ಸಂಖ್ಯೆ 4ಕ್ಕೆ ಇಳಿಕೆಯಾಗಿದೆ.
Kshetra Samachara
09/01/2025 04:17 pm