ಕೊಡಗು: ನಾಪೋಕ್ಲುವಿನಲ್ಲಿ 2024ರಲ್ಲಿ ನಡೆದ ಕುಂಡ್ಯೋಳಂಡ ಕೊಡವ ಕೌಟುಂಬಿಕ ಹಾಕಿ ಪಂದ್ಯಾವಳಿ ಆಯೋಜಕರ ಕುಟುಂಬಕ್ಕೆ 1 ಕೋಟಿ ರೂ. ಗಳ ಚೆಕ್ ಅನ್ನು ಯುವ ಸಬಲೀಕರಣ ಇಲಾಖೆ ವತಿಯಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿತರಿಸಿದರು.
ಈ ಸಂದರ್ಭ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಕುಂಡ್ಯೋಳಂಡ ಕೊಡವ ಕೌಟುಂಬಿಕ ಹಾಕಿ ಪಂದ್ಯಾವಳಿಯು ಗಿನ್ನಿಸ್ ಬುಕ್ ಆಫ್ ರೆಕಾರ್ಡ್ಸ್ ನಲ್ಲಿ ದಾಖಲಾಗಿರುವುದು ಹೆಮ್ಮೆಯ ಸಂಗತಿಯಾಗಿದೆ.
ಹಾಕಿ ಕೊಡವರ ಜನಪ್ರಿಯ ಕ್ರೀಡೆಯಾಗಿದ್ದು, ಕೊಡಗಿನಲ್ಲಿ ಪ್ರತಿ ವರ್ಷ ಕೊಡವ ಕೌಟುಂಬಿಕ ಹಾಕಿ ಪಂದ್ಯಾವಳಿ ಆಯೋಜಿಸುತ್ತಿರುವುದು ಶ್ಲಾಘನೀಯ. ಹಾಕಿ ಹುಟ್ಟಿದ್ದು ಭಾರತ ದೇಶದಲ್ಲಿ. ಧ್ಯಾನಚಂದ್ ಅವರಂತಹ ಹಾಕಿ ಮಾಂತ್ರಿಕ ಹುಟ್ಟಿದ ದೇಶ ನಮ್ಮದು. ಕ್ರಿಕೆಟ್ ಅಷ್ಟೇ ಅಲ್ಲ, ಹಾಕಿ ಕೂಡ ಅತ್ಯಂತ ಜನಪ್ರಿಯ ಕ್ರೀಡೆಯಾಗಿದ್ದು ಮುಂದಿನ ದಿನಗಳಲ್ಲಿಯೂ ಈ ಪರಂಪರೆ ಮುಂದುವರೆಸಿಕೊಂಡು ಹೋಗಿ ಎಂದು ಶುಭ ಹಾರೈಸಿದರು.
ಕೊಡಗು ಜಿಲ್ಲೆಯಲ್ಲಿ ಕೊಡವ ಕುಟುಂಬಗಳು ಪ್ರತಿ ವರ್ಷ ಸಾಂಪ್ರದಾಯಿಕ ಕೌಟುಂಬಿಕ ಹಾಕಿ ಪಂದ್ಯಾವಳಿಯನ್ನು ಕಳೆದ 23 ವರ್ಷಗಳಿಂದ ನಡೆಸಿಕೊಂಡು ಬರುತ್ತಿದ್ದು, ಬಹಳಷ್ಟು ಕೊಡವರು ರಾಷ್ಟ್ರೀಯ ಹಾಕಿ ತಂಡದಲ್ಲಿ ಆಟ ಆಡಿದ್ದಾರೆ. ರಾಜ್ಯ ಸರ್ಕಾರ ಹಾಕಿ ಪಂದ್ಯಕ್ಕೆ ಎಲ್ಲಾ ರೀತಿಯ ಪ್ರೋತ್ಸಾಹ ನೀಡುತ್ತಾ ಬಂದಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.
PublicNext
09/01/2025 05:14 pm