ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಶಿವಮೊಗ್ಗ : ಕೇಂದ್ರ ಸರ್ಕಾರದ ರೈತ ವಿರೋಧಿ ಧೋರಣೆ ಖಂಡಿಸಿ ಪ್ರತಿಭಟನೆ - ಕರಿಬಸಪ್ಪಗೌಡ

ಶಿವಮೊಗ್ಗ : ರಾಷ್ಟ್ರೀಯ ರೈತ ಹೋರಾಟದ ಸಂಚಾಲಕ ಧಲೇವಾಲಾ ಅವರ 43 ದಿನದ ಉಪವಾಸ ಸತ್ಯಾಗ್ರಹದ ಬಗ್ಗೆ ನಿರ್ಲಕ್ಷ್ಯ ಧೋರಣೆ ತೋರುತ್ತಿರುವ ಕೇಂದ್ರ ಸರ್ಕಾರದ ರೈತ ವಿರೋಧಿ ಧೋರಣೆ ಖಂಡಿಸಿ ರಾಜ್ಯಾದ್ಯಂತ ಜಿಲ್ಲಾ, ತಾಲೂಕು ಕೇಂದ್ರಗಳಲ್ಲಿ ಜನವರಿ 13 ರಂದು ರೈತ ಸಂಘಟನೆ ಗಳಿಂದ ಪ್ರಧಾನ ಮಂತ್ರಿ ಹಾಗೂ ಕೇಂದ್ರ ಕೃಷಿ ಮಂತ್ರಿಯ ಪ್ರತಿಕೃತಿ ದಹನ ಚಳುವಳಿಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ರಾಜ್ಯಾಧ್ಯಕ್ಷ ಎಂ.ಪಿ. ಕರಿಬಸಪ್ಪಗೌಡ ತಿಳಿಸಿದರು.

ನಗರದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ದೆಹಲಿ ಗಡಿ ಕನೂರಿಯಲ್ಲಿ ಪಂಜಾಬ್‌ನ ಸಂಯುಕ್ತ ಕಿಸಾನ್ ಮೋರ್ಚ (ರಾಜಕೀಯೇತರ) ಸಂಘಟನೆಯ ರಾಷ್ಟ್ರೀಯಸಂಚಾಲಕ ರೈತ ಹೋರಾಟಗಾರ ಜಗಜಿತ್ ಸಿಂಗ್ ಧಲೇವಾಲಾ 45 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದರೂ ಕೇಂದ್ರ ಸರ್ಕಾರ ನಿರ್ಲಕ್ಷ ವಹಿಸಿದೆ. ಈ ಕೂಡಲೇ ಕೇಂದ್ರ ಸರ್ಕಾರ ಮಾತುಕತೆ ನಡೆಸಿ ಧಲೇವಾಲಾ ಪ್ರಾಣ ಉಳಿಸಬೇಕು. ಕೃಷಿ ಉತ್ಪನ್ನಗಳಿಗೆ ಎಂಎಸ್‌ಪಿ ಗ್ಯಾರಂಟಿ ಕಾನೂನು ಜಾರಿ ತರಬೇಕು ಎಂದು ಒತ್ತಾಯಿಸಲು ಈ ಹೋರಾಟ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.

ಬೈಟ್ : ಎಂ.ಪಿ. ಕರಿಬಸಪ್ಪಗೌಡ, ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ರಾಜ್ಯಾಧ್ಯಕ್ಷ

Edited By : PublicNext Desk
Kshetra Samachara

Kshetra Samachara

09/01/2025 05:19 pm

Cinque Terre

620

Cinque Terre

0

ಸಂಬಂಧಿತ ಸುದ್ದಿ