ಶಿವಮೊಗ್ಗ : ಇ-ಸ್ವತ್ತಿಗಾಗಿ ಪ್ರತಿನಿತ್ಯ ಸಾವಿರಾರು ಜನರು ಮಹಾನಗರ ಪಾಲಿಕೆಗೆ ಅಲೆದಾಡುತ್ತಿದ್ದಾರೆ. ಅಧಿಕಾರಿಗಳು ಕಾಲಮಿತಿಯಲ್ಲಿ ಜನರಿಗೆ ಸೇವೆ ನೀಡದಿದ್ದರೆ ಮಹಾನಗರ ಪಾಲಿಕೆಗೆ ಮುತ್ತಿಗೆ ಹಾಕಲಾಗುವುದು ಎಂದು ಶಿವಮೊಗ್ಗ ನಾಗರಿಕ ಹಿತರಕ್ಷಣಾ ವೇದಿಕೆಗಳ ಒಕ್ಕೂಟ ಸಂಘಟನಾ ಕಾರ್ಯದರ್ಶಿ ಡಾ.ಎ.ಸತೀಶ್ ಕುಮಾರ್ ಶೆಟ್ಟಿ ಎಚ್ಚರಿಕೆ ನೀಡಿದ್ದಾರೆ.
ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ ಅವರು, ಕಳೆದ ಮೂರು ತಿಂಗಳಿನಿಂದ ಇ-ಸ್ವತ್ತಿಗಾಗಿ ಜನರು ಪಾಲಿಕೆಗೆ ಓಡಾಟ ನಡೆಸುತ್ತಿದ್ದಾರೆ. ಇದು ಆಡಳಿತ ವ್ಯವಸ್ಥೆಯ ವೈಫಲ್ಯವನ್ನು ಎತ್ತಿ ತೋರಿಸುತ್ತಿದೆ. ಶಿವಮೊಗ್ಗದ ಶಾಸಕರು ಮತ್ತು ಮಹಾನಗರ ಪಾಲಿಕೆಯ ಆಯುಕ್ತರು ಹೊಸದಾಗಿ ಕೌಂಟರ್ ಗಳನ್ನು ತೆರೆಯಲಾಗುವುದು ಎಂದು ಕಳೆದ ಎರಡು ತಿಂಗಳಿನಿಂದ ಹೇಳುತ್ತಲೇ ಬರುತ್ತಿದ್ದಾರೆ. ಹೇಳಿಕೆಯಿಂದ ಯಾವುದೇ ಪ್ರಯೋಜನ ಆಗುವುದಿಲ್ಲ ಸಮರೋಪಾದಿಯಲ್ಲಿ ಕೆಲಸ ಮಾಡಿ ಸೇವೆ ಪ್ರಾರಂಭಿಸಬೇಕು ಎಂದು ಹೇಳಿದ್ದಾರೆ.
Kshetra Samachara
09/01/2025 05:21 pm