ಕೋಲಾರ : ರಾಜ್ಯದಲ್ಲಿ ಹ್ಯೂಮನ್ ಮೆಟಾನ್ಯೂಮೊ ವೈರಸ್ ಸೋಂಕು ವರದಿಯಾಗಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ರೋಗ ಲಕ್ಷಣಗಳು ಕಂಡು ಬಂದ ಕೂಡಲೇ ವೈದ್ಯರನ್ನು ಸಂಪರ್ಕಿಸುವಂತೆ ಜಿಲ್ಲಾಧಿಕಾರಿ ಡಾ. ಎಂ.ಆರ್. ರವಿ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.
ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದ ಅವರು, ಆರೋಗ್ಯ ಇಲಾಖೆ ಹೊರಡಿಸಿರುವ ಮಾರ್ಗಸೂಚಿಯನ್ವಯ ಕೆಮ್ಮುವಾಗ, ಸೀನುವಾಗ ಬಾಯಿ ಮತ್ತು ಮೂಗನ್ನು ಕರವಸ್ತ್ರ ಅಥವಾ ಟಿಶ್ಯೂ ಪೇಪರ್‍ನಿಂದ ಮುಚ್ಚಿಕೊಳ್ಳಬೇಕು. ಕೈಗಳನ್ನು ತೊಳೆದು ಕೊಳ್ಳಬೇಕು. ಜ್ವರ, ನೆಗಡಿ, ಕೆಮ್ಮು ಇದ್ದಲ್ಲಿ ಸಾರ್ವಜನಿಕ ಸ್ಥಳಗಳಿಂದ ದೂರವಿರಬೇಕು. ಬಳಸಿದ ಟಿಶ್ಯೂ ಕರ ವಸ್ತ್ರವನ್ನು ಪುನಃ ಬಳಕೆ ಮಾಡಬಾರದು ಅನಾರೋಗ್ಯದ ಲಕ್ಷಣಗಳಿದ್ದವರು ಸಭೆ-ಸಮಾರಂಭದಲ್ಲಿ ಭಾಗವಹಿಸದಂತೆ ಸೂಚಿಸಲಾಗಿದೆ.
ಶಾಲಾ ಮಕ್ಕಳಲ್ಲಿ ಹಾಗೂ ಅಂಗನವಾಡಿ ಮಕ್ಕಳಲ್ಲಿ ಸೋಂಕು ಹೆಚ್ಚಾಗಿ ಕಂಡು ಬರುವ ಸಾಧ್ಯತೆಯಿರುವುದರಿಂದ ಶೀತ, ನೆಗಡಿ, ಕೆಮ್ಮು, ಜ್ವರದಿಂದ ಬಳಲುತ್ತಿರುವ ಮಕ್ಕಳನ್ನು ವೈದ್ಯರ ಬಳಿ ಕರೆದೊಯ್ದು ಸಕಾಲದಲ್ಲಿ ಚಿಕಿತ್ಸೆ ಕೊಡಿಸಬೇಕು ಎಂದು ತಿಳಿಸಿದರು.
Kshetra Samachara
09/01/2025 05:25 pm