ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ರಾಯಭಾರಿಯಾಗಿ ನಟ ಕಿಶೋರ್ ಕುಮಾರ್ ನೇಮಕ

ಬೆಂಗಳೂರು: 16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ರಾಯಭಾರಿಯಾಗಿ ನಟ ಕಿಶೋರ್ ಕುಮಾರ್ ನೇಮಕಗೊಂಡಿದ್ದಾರೆ.

ಮಾರ್ಚ್ 1ರಿಂದ 8ರವರೆಗೆ ಬೆಂಗಳೂರಿನಲ್ಲಿ ನಡೆಯುವ 16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಈ ಬಾರಿ "ಸರ್ವ ಜನಾಂಗದ ಶಾಂತಿಯ ತೋಟ" ಎಂಬ ಘೋಷವಾಕ್ಯದಡಿ ನಡೆಯುತ್ತಿದೆ. ಕಿಶೋರ್ ಕುಮಾರ್ ಕನ್ನಡ ಅಲ್ಲದೇ ಹಿಂದಿ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ ಭಾಷೆಗಳಲ್ಲಿ ನಟಿಸಿ ಜನಮನ್ನಣೆ ಪಡೆದ ನಟರಾಗಿದ್ದಾರೆ. ಈ ಬಾರಿ ಕಿಶೋರ್ ಕುಮಾರ್ ಅವರ ಮುಂದಾಳತ್ವದಲ್ಲಿ 16 ನೇ ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವ ನಡೆಯಲಿದೆ. 8 ದಿನಗಳ ಬೆಂಗಳೂರಿನ 13 ಚಿತ್ರ ಮಂದಿರಗಳಲ್ಲಿ ದೇಶ ವಿದೇಶಗಳ ಅತ್ಯುನ್ನತ ಚಿತ್ರಗಳ ಪ್ರದರ್ಶನವಾಗಲಿದೆ.

ಇನ್ನೂ 16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ರಾಯಭಾರಿಯಾಗಿ ನಟ ಕಿಶೋರ್ ಕುಮಾರ್ ನೇಮಕಕ್ಕೆ ಸಿಎಂ ಸಿದ್ದರಾಮಯ್ಯ ನಟ ಕಿಶೋರ್ ಕುಮಾರ್‌ಗೆ ಅಭಿನಂದನೆಗಳು ತಿಳಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ"ಸರ್ವ ಜನಾಂಗದ ಶಾಂತಿಯ ತೋಟ" ಎಂಬ ಘೋಷವಾಕ್ಯದಡಿ ಈ ಬಾರಿಯ ಚಲನಚಿತ್ರೋತ್ಸವವನ್ನು ಆಯೋಜಿಸಲಾಗುತ್ತಿದ್ದು, ಈ ಸಾಲುಗಳಿಗೆ ಬದ್ಧವಾಗಿರುವ ಕಿಶೋರ್ ಅವರ ಮುಂದಾಳತ್ವದಲ್ಲಿ ಬೆಂಗಳೂರು ಚಲನಚಿತ್ರೋತ್ಸವ ಅತ್ಯಂತ ಯಶಸ್ವಿಯಾಗಲಿದೆ ಎಂಬ ಪೂರ್ಣ ವಿಶ್ವಾಸವಿದೆ ಎಂದು ಹಾರೈಸಿದ್ದಾರೆ.

Edited By : Nagaraj Tulugeri
PublicNext

PublicNext

09/01/2025 06:04 pm

Cinque Terre

21.29 K

Cinque Terre

0