ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಶಿವಮೊಗ್ಗ : ತಿರುಪತಿಯಲ್ಲಿ ಕಾಲ್ತುಳಿತ, ಕ್ರಮಕ್ಕೆ ಆಗ್ರಹಿಸಿ ಮಹಿಳಾ ಕಾಂಗ್ರೆಸ್‌ ನಿಂದ ಎಡಿಸಿಗೆ ಮನವಿ

ಶಿವಮೊಗ್ಗ : ಜನವರಿ 08 ರಂದು ತಿರುಪತಿ ತಿರುಮಲ ದೇವಸ್ಥಾನದಲ್ಲಿ ನಡೆದ ವೈಕುಂಠ ಏಕಾದಶಿಯಲ್ಲಿ ಕಾಲ್ತುಳಿತ ಸಂಭವಿಸಿ ಐದಾರು ಜನ ಸಾವನಪ್ಪಿದ್ದು ಭಕ್ತರ ಸಾವಿಗೆ ಕಾರಣರಾದ ತಿರುಪತಿ ದೇವಾಸ್ಥಾನದ ಆಡಳಿತ ಮಂಡಳಿ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಶಿವಮೊಗ್ಗದಲ್ಲಿ ಎಡಿಸಿ ಮೂಲಕ ರಾಷ್ಟ್ರಪತಿಗಳಿಗೆ ಶಿವಮೊಗ್ಗ ಜಿಲ್ಲಾ ಮಹಿಳಾ ಕಾಂಗ್ರೆಸ್‌ ಕಾರ್ಯಕರ್ತರು ಮನವಿ ಸಲ್ಲಿಸಿದರು.

ಲಕ್ಷಾಂತರ ಭಕ್ತರು ಆಗಮಿಸುವ ನಿರೀಕ್ಷೆ ಇದ್ದರು ದೇವಾಲಯದ ಆಡಳಿತ ಮಂಡಳಿ ನಿರ್ಲಕ್ಷ್ಯ ತೋರಿ ಭಕ್ತರ ಸಾವಿಗೆ ಕಾರಣರಾಗಿದ್ದಾರೆ, ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಮಹಿಳೆಯರು ಒತ್ತಾಯಿಸಿದರು. ಇನ್ನು ಮೃತರಾದ ಭಕ್ತರಿಗೆ ಸೂಕ್ತ ಪರಿಹಾರ ಹಾಗೂ ಗಂಭೀರ ಗಾಯಗೊಂಡಿರುವ ಗಾಯಾಳುಗಳ ಚಿಕಿತ್ಸೆ ಗೆ ದೇವಾಲಯ ಆಡಳಿತ ಮಂಡಳಿ ಪರಿಹಾರ ನೀಡಬೇಕೆಂದು ಒತ್ತಾಯಿಸಿದರು. ಈ ವೇಳೆ ಮಹಿಳಾ ಕಾಂಗ್ರೆಸ್ ಮುಖಂಡರಾದ ಸುವರ್ಣ ನಾಗರಾಜ್, ರೇಷ್ಮಾ, ಸ್ಟೇಲ್ಲಾ ಮಾರ್ಟಿನ್, ಚಂದ್ರಿಕಾ ಪಿ. ಷರ್ಮೀನ್ ಭಾನು ಮತ್ತಿತ್ತರು ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

09/01/2025 06:18 pm

Cinque Terre

300

Cinque Terre

0

ಸಂಬಂಧಿತ ಸುದ್ದಿ