ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಶಿವಮೊಗ್ಗ: ಕೇಂದ್ರ ಸರ್ಕಾರದ ರೈತ ವಿರೋಧಿ ಧೋರಣೆಗೆ ಖಂಡನೆ - ರಾಜ್ಯಾದ್ಯಂತ ವಿವಿಧ ಸ್ತರಗಳಲ್ಲಿ ರೈತರ ಹೋರಾಟ ಘೋಷಣೆ

ಶಿವಮೊಗ್ಗ: ರಾಷ್ಟ್ರೀಯ ರೈತ ಹೋರಾಟದ ಸಂಚಾಲಕ ಧಲೇವಾಲಾ 43 ದಿನದ ಉಪವಾಸ ಸತ್ಯಾಗ್ರಹದ ಬಗ್ಗೆ ನಿರ್ಲಕ್ಷ್ಯ ಧೋರಣೆ ತೋರುತ್ತಿರುವ ಕೇಂದ್ರ ಸರ್ಕಾರದ ರೈತ ವಿರೋಧಿ ಧೋರಣೆ ಖಂಡಿಸಿ ರಾಜ್ಯಾದ್ಯಂತ ಜಿಲ್ಲಾ, ತಾಲೂಕು ಕೇಂದ್ರಗಳಲ್ಲಿ ಜನವರಿ 13ರಂದು ರೈತ ಸಂಘಟನೆಗಳಿಂದ ಪ್ರಧಾನ ಮಂತ್ರಿ ಹಾಗೂ ಕೇಂದ್ರ ಕೃಷಿ ಮಂತ್ರಿಯ ಪ್ರತಿಕೃತಿ ದಹನ ಚಳುವಳಿಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ರಾಜ್ಯಾಧ್ಯಕ್ಷ ಎಂ.ಪಿ.ಕರಿಬಸಪ್ಪಗೌಡ ತಿಳಿಸಿದರು.

ಇಂದು ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ದೆಹಲಿ ಗಡಿ ಕನೂರಿಯಲ್ಲಿ ಪಂಜಾಬ್‍ನ ಸಂಯುಕ್ತ ಕಿಸಾನ್ ಮೋರ್ಚ (ರಾಜಕೀಯೇತರ) ಸಂಘಟನೆಯ ರಾಷ್ಟ್ರೀಯ ಸಂಚಾಲಕ ರೈತ ಹೋರಾಟಗಾರ ಜಗಜಿತ್ ಸಿಂಗ್ ಧಲೇವಾಲಾ 45 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದರೂ ಕೇಂದ್ರ ಸರ್ಕಾರ ನಿರ್ಲಕ್ಷ ವಹಿಸಿದೆ. ಈ ಕೂಡಲೇ ಕೇಂದ್ರ ಸರ್ಕಾರ ಮಾತುಕತೆ ನಡೆಸಿ ಧಲೇವಾಲಾ ಪ್ರಾಣ ಉಳಿಸಬೇಕು. ಕೃಷಿ ಉತ್ಪನ್ನಗಳಿಗೆ ಎಂಎಸ್‍ಪಿ ಗ್ಯಾರಂಟಿ ಕಾನೂನು ಜಾರಿ ತರಬೇಕು ಎಂದು ಒತ್ತಾಯಿಸಲು ಈ ಹೋರಾಟ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.

ಜನವರಿ 14ರಿಂದ 16ರವರೆಗೆ ಹಳ್ಳಿ ಹಳ್ಳಿಗಳಲ್ಲಿ ತಾಲೂಕು ಮಟ್ಟದಲ್ಲಿ ಪಂಜಿನ ಪ್ರತಿಭಟನೆ ಮೂಲಕ ಕೇಂದ್ರದ ಪ್ರಧಾನಿ ಪ್ರತಿಕೃತಿ ಸುಡಲಾಗುವುದು. ದೇಶಾದ್ಯಂತ ಕರೆ ನೀಡಲಾಗಿರುವ ಹಿನ್ನೆಲೆಯಲ್ಲಿ ಈ ಚಳುವಳಿ ನಡೆಸಲಾಗುವುದು ಎಂದರು.

ಜನವರಿ 26 ರಂದು ಕೇಂದ್ರ ಸರ್ಕಾರಕ್ಕೆ ಬಿಸಿ ಮುಟ್ಟಿಸಲು ಎಂಎಸ್‍ಪಿ ಗ್ಯಾರಂಟಿ ಕಾನೂನು ಜಾರಿ, ರೈತರ ಸಂಪೂರ್ಣ ಸಾಲ ಮನ್ನಾ ಎಂ.ಎಸ್ ಸ್ವಾಮಿನಾಥನ್ ವರದಿ ಜಾರಿಗೆ ಒತ್ತಾಯಿಸಿ ತಾಲೂಕು ಜಿಲ್ಲಾ ಗ್ರಾಮೀಣ ಕೇಂದ್ರಗಳಲ್ಲಿ ಟ್ರ್ಯಾಕ್ಟರ್ ಮೆರವಣಿಗೆ ನಡೆಸಲಾಗುವುದು ಎಂದರು.

ಈ ಬಗ್ಗೆ ಕೇಂದ್ರ ಸರ್ಕಾರಕ್ಕೆ ಗಂಭೀರ ಎಚ್ಚರಿಕೆ ನೀಡಬೇಕು. ದೇಶದ ರೈತರ ಶಕ್ತಿ ತೋರಿಸಬೇಕು. ದೇಶದ ರೈತರ ಒಳಿತಿಗಾಗಿ ಉಪವಾಸ ಸತ್ಯಾಗ್ರಹದ ಮೂಲಕ ತಮ್ಮ ಪ್ರಾಣ ತ್ಯಾಗ ಮಾಡುತ್ತಿರುವ ಧಲೇವಾಲಾ ಬೆಂಬಲಕ್ಕೆ ನಾವೆಲ್ಲ ರೈತರಾಗಿ ನಿಲ್ಲಬೇಕು ಎಂದು ರೈತರಲ್ಲಿ ಮನವಿ ಮಾಡಿದರು.

Edited By : Suman K
Kshetra Samachara

Kshetra Samachara

09/01/2025 06:34 pm

Cinque Terre

1.9 K

Cinque Terre

0

ಸಂಬಂಧಿತ ಸುದ್ದಿ