ರಾಯ್‌ಪುರ್: ಛತ್ತೀಸ್‌ಗಢದ ಮುಂಗೇಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಸ್ಥಾವರದಲ್ಲಿ ಚಿಮಣಿ ಕುಸಿದು ಸುಮಾರು 25 ಜನರು ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಇದರಲ್ಲಿ ಹಲವರು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ.
ಘಟನೆ ನಡೆದಾಗ ಸ್ಥಾವರವು ಕಬ್ಬಿಣದ ಪೈಪ್‌ಗಳನ್ನು ತಯಾರಿಸುತ್ತಿತ್ತು ಎಂದು ವರದಿಯಾಗಿದೆ. ಸ್ಥಳೀಯ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ರಕ್ಷಣಾ ಕಾರ್ಯಾಚರಣೆಗಳು ನಡೆಸಿದ್ದಾರೆ. ಹೈ ಅಲರ್ಟ್ ಆಗಿರುವಂತೆ ಜಿಲ್ಲಾ ಆಸ್ಪತ್ರೆಗಳಿಗೆ ಅಧಿಕಾರಿಗಳು ಸೂಚನೆ ನೀಡಿದ್ದಾರೆ.
PublicNext
09/01/2025 06:39 pm