ಹಿರಿಯೂರು : ವಾಣಿ ವಿಲಾಸ ಸಾಗರ ಜಲಾಶಯಕ್ಕೆ 700 ಕ್ಯೂಸೆಕ್ಸ್ ಒಳಹರಿವು ಬರುತ್ತಿದ್ದು, ವಾಣಿವಿಲಾಸ ಸಾಗರ ಜಲಾಶಯದಿಂದ ಅಷ್ಟೇ ಪ್ರಮಾಣದ ನೀರು ಯಾವುದೇ ಸಂದರ್ಭದಲ್ಲಾದರೂ ಕೋಡಿಯ ಮುಖಾಂತರ ವೇದಾವತಿ ನದಿಗೆ ಹರಿಯುತ್ತದೆ.
ಹಾಗಾಗಿ ವೇದಾವತಿ ನದಿಯ ತಗ್ಗು ಪ್ರದೇಶ ಹಾಗೂ ನದಿಯ ಎರಡೂ ದಂಡೆಗಳಲ್ಲಿ ಇರುವ ಸಾರ್ವಜನಿಕರು ತಮ್ಮ ಆಸ್ತಿ-ಪಾಸ್ತಿ ಹಾಗೂ ಜಾನುವಾರುಗಳ ರಕ್ಷಣೆಗೆ ಎಚ್ಚರಿಕೆ ವಹಿಸಿ ಸೂಕ್ತ ಮುಂಜಾಗ್ರತೆ ವಹಿಸಬೇಕು ಎಂದು ಹಿರಿಯೂರು ಕ್ಯಾಂಪ್ ವಿಶ್ವೇಶ್ವರಯ್ಯ ಜಲ ನಿಗಮ ನಿಯಮಿತ ಭದ್ರಾ ಮೇಲ್ದಂಡೆ ಯೋಜನೆ ವಿಭಾಗದ ಕಾರ್ಯಪಾಲಕ ಇಂಜಿನಿಯರ್ ತಿಳಿಸಿದ್ದಾರೆ.
Kshetra Samachara
09/01/2025 06:40 pm