ಹಿರಿಯೂರು: ಪ್ರಾಥಮಿಕ ಶಾಲಾ ಶಿಕ್ಷಕರ ಸಮಸ್ಯೆಗಳು ಸಂಘದ ರಾಜ್ಯ ಘಟಕದ ಅಧ್ಯಕ್ಷರಾಗಿರುವ ಷಡಕ್ಷರಿ ಅವರ ಗಮನದಲ್ಲಿವೆ. ಮುಂದಿನ ದಿನಗಳಲ್ಲಿ ಶಿಕ್ಷಕರ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವಲ್ಲಿ ನೂರಕ್ಕೆ ನೂರರಷ್ಟು ಪ್ರಯತ್ನ ನಡೆಸಲಿದ್ದಾರೆ. ಅವರ ಕೈ ಬಲಪಡಿಸುವ ಕೆಲವನ್ನು ಎಲ್ಲರೂ ಮಾಡೋಣ ಸರ್ಕಾರಿ ನೌಕರರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಆರ್.ರಮೇಶ್ ಎಂಬುದಾಗಿ ಅವರು ಹೇಳಿದರು.
ನಗರದ ನೌಕರರ ಭವನದಲ್ಲಿ ಬುಧವಾರದಂದು ರಾಜ್ಯ ಸರ್ಕಾರಿ ನೌಕರರ ಸಂಘದ ತಾಲ್ಲೂಕು ಶಾಖೆ ಹಾಗೂ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘಗಳ ಸಹಯೋಗದಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರ ಸಮಸ್ಯೆಗಳ ಕುರಿತು ಚರ್ಚಿಸಲು ಹಮ್ಮಿಕೊಳ್ಳಲಾಗಿದ್ದ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
Kshetra Samachara
09/01/2025 06:46 pm