ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ಸ್ತಬ್ಧಗೊಂಡ ವಿದ್ಯಾಕಾಶಿ, ವ್ಯಾಪಾರ ವಹಿವಾಟಿಗೆ ಬ್ರೇಕ್

ಧಾರವಾಡ: ಅಮಿತ್ ಶಾ ಹೇಳಿಕೆ ಖಂಡಿಸಿ ದಲಿತಪರ ಸಂಘಟನೆಗಳು ಇಂದು ಕರೆ ನೀಡಿದ್ದ ಅವಳಿನಗರ ಬಂದ್‌ಗೆ ಧಾರವಾಡದಲ್ಲಿ ಉತ್ತಮ ಬೆಂಬಲ ವ್ಯಕ್ತವಾಗಿದೆ.

ಬೆಳಿಗ್ಗೆ 6 ಗಂಟೆಯಿಂದಲೇ ಪ್ರತಿಭಟನೆಗಿಳಿದ ದಲಿತ ಮುಖಂಡರು ಹಾಗೂ ಕಾರ್ಯಕರ್ತರು, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಪ್ರತಿಕೃತಿ ದಹಿಸಿ ಪ್ರತಿಭಟಿಸಿದರು. ಅಲ್ಲದೇ ಯಾವುದೇ ಅಂಗಡಿ- ಮುಂಗಟ್ಟುಗಳನ್ನು ತೆರೆಯಲು ಅವಕಾಶ ಕೊಡದ ಪ್ರತಿಭಟನಾಕಾರರು, ಅಲ್ಲಲ್ಲಿ ತೆರೆದಿದ್ದ ಅಂಗಡಿಗಳನ್ನು ಒತ್ತಾಯಪೂರ್ವಕವಾಗಿ ಬಂದ್ ಸಹ ಮಾಡಿಸಿದರು.

ಕೆಎಸ್‌ಆರ್‌ಟಿಸಿ ಬಸ್‌ಗಳು ಕೂಡ ರಸ್ತೆಗಿಳಿದಿರಲಿಲ್ಲ. ಧಾರವಾಡದ ಬಸ್‌ ನಿಲ್ದಾಣ ಪ್ರಯಾಣಿಕರಿಲ್ಲದೇ ಬಿಕೋ ಎನ್ನುತ್ತಿತ್ತು. ಧಾರವಾಡದ ಮಾರುಕಟ್ಟೆ ಸಂಪೂರ್ಣ ಬಿಕೋ ಎನ್ನುತ್ತಿತ್ತು. ವ್ಯಾಪಾರ, ವಹಿವಾಟು ಸಂಪೂರ್ಣ ಸ್ತಬ್ಧಗೊಂಡಿದ್ದರಿಂದ ಬಂದ್ ಸಂಪೂರ್ಣ ಯಶಸ್ವಿಯಾದಂತಾಯಿತು.

Edited By : Somashekar
Kshetra Samachara

Kshetra Samachara

09/01/2025 07:17 pm

Cinque Terre

12.31 K

Cinque Terre

2

ಸಂಬಂಧಿತ ಸುದ್ದಿ