ಹುಬ್ಬಳ್ಳಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ನಾಥೂರಾಮ್ ಗೋಡ್ಸೆ ಸಂಸ್ಕೃತಿಯಲ್ಲಿ ಹುಟ್ಟಿ ಬೆಳೆದಿದ್ದಾರೆ. ಅವರಿಗೆ ದೇಶಾಭಿಮಾನ ಇಲ್ಲ. ದೇಶದ ಸಂವಿಧಾನದ ಬಗ್ಗೆ ಗೌರವ ಇಲ್ಲ ಎಂದು ಕಾಂಗ್ರೆಸ್ ಮುಖಂಡ ಅಸ್ಪಾಕ್ ಕುಮಟಾಕರ್ ಆಕ್ರೋಶ ವ್ಯಕ್ತಪಡಿಸಿದರು.
ಹುಬ್ಬಳ್ಳಿ ಧಾರವಾಡ ಬಂದ್‌ಗೆ ಬೆಂಬಲ ಸೂಚಿಸಿ ನಂತರ ಮಾತನಾಡಿದ ಅವರು ಬಿಜೆಪಿ ವಿರುದ್ಧ ಹರಿಹಾಯ್ದರು. ಇನ್ನು ಬಿಜೆಪಿ ಹಾಗೂ ಅಮಿತ್ ಶಾ ಅವರಿಗೆ ನ್ಯಾಯಾಂಗ ಕಾರ್ಯಾಂಗ ಶಾಸಕಾಂಗದ ಮೇಲೆ ನಂಬಿಕೆ ಇಲ್ಲ. ಆದ್ದರಿಂದ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ತಕ್ಷಣವೇ ಅಮಿತ್ ಶಾ ಅವರನ್ನು ಸಚಿವ ಸ್ಥಾನದಿಂದ ಕಿತ್ತು ಹಾಕಬೇಕು. ಇಲ್ಲವಾದರೆ ಮತ್ತೆ ಉಗ್ರ ಹೋರಾಟ ಮಾಡಬೇಕಾಗುತ್ತದೆ. ಇವರಿಗೆ ಸಂವಿಧಾನದ ಬಗ್ಗೆ ಗೌರವ ಇಲ್ಲ, ಇವರು ಪ್ರತಿ ಕ್ಷಣದಲ್ಲಿ ಸಹ ದಲಿತರನ್ನ ವಿರೋಧ ಮಾಡುವುದು ಇವರ ಹುಟ್ಟು ಗುಣ, ಕೂಡಲೇ ದೇಶದ ಜನರ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದರು.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
09/01/2025 07:21 pm