ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಳಗಾವಿ: ಶಾಸಕ ಅಭಯ ಪಾಟೀಲ್ ಹಾಗೂ ಮಹಾರಾಷ್ಟ್ರ ಸಚಿವನ ಭಾವಚಿತ್ರಕ್ಕೆ ಬೆಂಕಿ ಹಚ್ಚಿದ ಹೋರಾಟಗಾರರು

ಬೆಳಗಾವಿ : ಬೆಳಗಾವಿ ನಗರದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಶಿವರಾಮೇಗೌಡ ಬಣದ ವತಿಯಿಂದ ಜೈ ಮಹಾರಾಷ್ಟ್ರ ಘೋಷಣೆ ಕೂಗಿದವರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಪ್ರತಿಭಟನೆ ನಡೆಸಲಾಯಿತು.

ಇಂದು ನಗರದ ಕನ್ನಡ ಸಾಹಿತ್ಯ ಭವನದಿಂದ ಬೃಹತ್ ಪ್ರತಿಭಟನೆ ಆರಂಭಿಸಿದ ಕನ್ನಡಪರ ಹೋರಾಟಗಾರರು ಚೆನ್ನಮ್ಮ ವೃತ್ತದಲ್ಲಿ ಶಾಸಕ ಅಭಯ ಪಾಟೀಲ್ ಹಾಗೂ ಜೈ ಮಹಾರಾಷ್ಟ್ರ ಎಂದು ಘೋಷಣೆ ಕೂಗಿದ ಮಹಾರಾಷ್ಟ್ರ ಸಚಿವನ ಭಾವ ಚಿತ್ರಕ್ಕೆ ಚಪ್ಪಲಿಯಿಂದ ಹೊಡೆದು ಭಾವ ಚಿತ್ರಕ್ಕೆ ಬೆಂಕಿ ಹಚ್ಚಿ ಆಕ್ರೋಶ ಹೊರ ಹಾಕಲಾಯಿತು. ಬಳಿಕ ಜಿಲ್ಲಾಧಿಕಾರಿ ಕಚೇರಿಗೆ ತೆರಳಿದ ಹೋರಾಟಗಾರರು ಜಿಲ್ಲಾಧಿಕಾರಿಗಳ ಮೂಲಕ ಮನವಿ ಸಲ್ಲಿಸಿದರು

Edited By : Somashekar
PublicNext

PublicNext

09/01/2025 07:34 pm

Cinque Terre

23.94 K

Cinque Terre

1

ಸಂಬಂಧಿತ ಸುದ್ದಿ