ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಅವಳಿನಗರ ಬಂದ್ ಯಶಸ್ವಿಗೊಂಡ ಬೆನ್ನಲ್ಲೇ ಸಾರಿಗೆ ಸಂಚಾರ ಯಥಾಸ್ಥಿತಿಗೆ ಮರುಳಿದ್ದು, ನಗರ, ಗ್ರಾಮೀಣ ಹಾಗೂ ಚಿಗರಿ ಸಂಚಾರ ಆರಂಭಗೊಂಡಿದೆ.
ಬೆಳಿಗ್ಗೆ 6ರಿಂದ ಸಂಜೆ 6 ವರೆಗೆ ಅವಳಿನಗರವನ್ನು ಬಂದ್ ಮಾಡಿ ಪ್ರತಿಭಟನೆ ಕರೆ ಕೊಟ್ಟಿರುವ ಬೆನ್ನಲ್ಲೇ ಬಸ್ ಸಂಚಾರ ಸ್ಥಗಿತಗೊಳಿಸಲಾಗಿದ್ದು, ಈಗ ಪುನರ್ ಆರಂಭಗೊಂಡಿದೆ. ಹೌದು.. ಒಂದೊಂದಾಗಿ ಬಸ್ ಸಂಚಾರ ಆರಂಭಿಸಿದ್ದು, ಬಂದ್ ಯಶಸ್ವಿಯಾದ ಬೆನ್ನಲ್ಲೇ ಸಂಚಾರ ವ್ಯವಸ್ಥೆ ಸಹಜ ಸ್ಥಿತಿಗೆ ಮರಳಿದೆ.
ಇನ್ನೂ ಜನರ ಅನುಕೂಲಕ್ಕೆ ಅನುಗುಣವಾಗಿ ಬಸ್ ಕಾರ್ಯಾಚರಣೆ ನಡೆಸಲು ಅಧಿಕಾರಿಗಳು ನಿರ್ಧರಿಸಿದ್ದು, ಬಸ್ ಸಂಚಾರ ಆರಂಭಗೊಂಡಿದೆ.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
09/01/2025 07:37 pm