ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಶಿವಮೊಗ್ಗ : ಭದ್ರಾವತಿ ನಗರಸಭೆ ವ್ಯಾಪ್ತಿಯಲ್ಲಿ ಫ್ಲೆಕ್ಸ್, ಕಟೌಟ್, ಪ್ಲಾಸ್ಟಿಕ್‍ ಬ್ಯಾನರ್ ನಿಷೇಧ

ಶಿವಮೊಗ್ಗ : ನಗರಸಭೆ ವ್ಯಾಪ್ತಿಯ ಪ್ರದೇಶದಲ್ಲಿ ಎಲ್ಲೆಂದರಲಿ ನಗರಸಭೆ ಅನುಮತಿಯಿಲ್ಲದೆ ಫ್ಲೆಕ್ಸ್, ಕಟೌಟ್‍, ಪ್ಲಾಸ್ಟಿಕ್ ಬ್ಯಾನರ್ ಗಳನ್ನ ಹಾಕುತ್ತಿರುವುದಕ್ಕೆ ನಗರಸಭೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಜನವರಿ 16 ರಿಂದ ಭದ್ರಾವತಿ ನಗರಸಭೆ ವ್ಯಾಪ್ತಿಯಲ್ಲಿ ಫ್ಲೆಕ್ಸ್, ಕಟೌಟ್‍, ಪ್ಲಾಸ್ಟಿಕ್ ಬ್ಯಾನರ್ ಗಳನ್ನ ಹಾಕುವುದನ್ನು ನಿಷೇಧಿಸಿದೆ ಎಂದು ನಗರಸಭೆ ಪೌರಾಯುಕ್ತ ಪ್ರಕಾಶ್ ಚೆನ್ನಣ್ಣನವರ್ ಹೇಳಿದರು.

ಪಟ್ಟಣದ ನಗರಸಭೆಯಲ್ಲಿ ಪ್ರಭಾರ ಅಧ್ಯಕ್ಷ ಮಣಿ ಅಧ್ಯಕ್ಷತೆಯಲ್ಲಿ ಗುರುವಾರ ನಡೆದ ತುರ್ತು ಸಭೆಯಲ್ಲಿ ಮಾತನಾಡಿದ ಅವರು ಪ್ಲೆಕ್ಸ್ ತೆರವಿಗೆ ಜನವರಿ 15 ರವರೆಗೆ ಗಡುವು ನೀಡಲಾಗಿದೆ. ಸಾರ್ವಜನಿಕವಾಗಿ ಫ್ಲೆಕ್ಸ್, ಕಟೌಟ್‍ಗಳು, ಪ್ಲಾಸ್ಟಿಕ್ ಬ್ಯಾನರ್ ಗಳಿಂದ ನಗರಸಭೆಯ ಸೌಂದರ್ಯ ಹಾಳಾಗುತ್ತಿದೆ ಮತ್ತು ನೋಡುಗರಿಗೆ ಕಿರಿಕಿರಿ ಉಂಟುಮಾಡುತ್ತಿದೆ ಎಂದು ಆನೇಕರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ, ಈ ಹಿನ್ನೆಲೆ ಕ್ರಮ ಕೈಗೊಳ್ಳಲಾಗಿದೆ ಎಂದರು.

Edited By : PublicNext Desk
Kshetra Samachara

Kshetra Samachara

09/01/2025 08:06 pm

Cinque Terre

420

Cinque Terre

0

ಸಂಬಂಧಿತ ಸುದ್ದಿ