ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸಾಗರ: ಮಕ್ಕಳನ್ನು ಶಿಕ್ಷಣದಿಂದ ವಂಚಿತರನ್ನಾಗಿ ಮಾಡಬೇಡಿ - ಶಾಸಕ ಗೋಪಾಲಕೃಷ್ಣ ಬೇಳೂರು

ಸಾಗರ: ಪೋಷಕರು ಮಕ್ಕಳನ್ನು ಶಿಕ್ಷಣದಿಂದ ವಂಚಿತರನ್ನಾಗಿ ಮಾಡಬೇಡಿ, ಪೋಷಕರು ಶಾಲೆಗೆ ಬನ್ನಿ, ಸರ್ಕಾರಿ ಶಾಲೆಗಳ ಶಿಕ್ಷಣ ಉತ್ತಮವಾಗಿದೆ, ಮಕ್ಕಳ ಶೈಕ್ಷಣಿಕ ಪ್ರಗತಿಗೆ ಎಲ್ಲಾರೂ ಕೈ ಜೋಡಿಸಬೇಕು, ಶಿಕ್ಷಣದ ಜೊತೆಗೆ ಸಾಂಸ್ಕೃತಿಕ ಹಾಗೂ ಸಾಹಿತ್ಯಕ ಅಭಿರುಚಿಗಳನ್ನು ಬೆಳೆಸಿಕೊಳ್ಳಬೇಕು ಎಂದು ಸಾಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಗೋಪಾಲಕೃಷ್ಣ ಬೇಳೂರು ಹೇಳಿದರು.

ತಾಲೂಕಿನ ಅವಿನಹಳ್ಳಿ ಸರ್ಕಾರಿ ಪ್ರೌಢಶಾಲೆಯ ವಾರ್ಷಿಕ ಸಾಂಸ್ಕೃತಿಕ ಸಂಭ್ರಮ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ತಾಲೂಕಿನಲ್ಲಿ ಶೈಕ್ಷಣಿಕವಾಗಿ ಉತ್ತಮ ಪರಿಸರವಿದ್ದು ಗ್ರಾಮೀಣ ಪ್ರದೇಶದಲ್ಲಿ ಪೋಷಕರು ಶಿಕ್ಷಣದ ಬಗ್ಗೆ ವಿಶೇಷ ಗಮನ ಹರಿಸಬೇಕು. ಶಿಕ್ಷಣಕ್ಕೆ ಹೆಚ್ಚಿನ ಮಹತ್ವ ನೀಡಿದಲ್ಲಿ ಮಾತ್ರ ಬದುಕು ಸುಧಾರಿಸಲು ಸಾಧ್ಯ. ನಿರಂತರ ಪ್ರಯತ್ನದಿಂದ ಗುರಿ ಮುಟ್ಟಬಹುದಾಗಿದೆ. ಸ್ಪರ್ಧಾತ್ಮಕ ಯುಗದಲ್ಲಿ ಹೆಚ್ಚಿನ ಶ್ರಮ ಅಗತ್ಯವಾಗಿದೆ. ಆವಿನಹಳ್ಳಿಯಂತಹ ಪ್ರದೇಶದಲ್ಲಿ ಅದರಲ್ಲೂ ಸರ್ಕಾರಿ ಶಾಲೆಯಲ್ಲಿ ನೂರಕ್ಕೆ ನೂರರಷ್ಟು ಫಲಿತಾಂಶ ಬರುತ್ತದೆ ಎಂದರೆ ಅದರ ಹಿಂದಿನ ಶ್ರಮಕ್ಕೆ ಅಭಿನಂದನೆಗಳನ್ನು ಹೇಳಬೇಕು. ಅಭಿವೃದ್ಧಿಪರವಾದ ಕೆಲಸಗಳು ತಾಲೂಕಿನಲ್ಲಿ ನಿರಂತರವಾಗಿ ನಡೆಯುತ್ತಿದೆ ಅದರಲ್ಲೂ ವಿಶೇಷವಾಗಿ ಶಿಕ್ಷಣ ಕ್ಷೇತ್ರ ಮುಂಚೂಣಿಯಲ್ಲಿದೆ ಎಂದರು.

ಆವಿನಹಳ್ಳಿ ಗ್ರಾಪಂ ಅಧ್ಯಕ್ಷರಾದ ಜಯಲಕ್ಷ್ಮಿ ಧರಣೇಂದ್ರ ಅವರು ಮಾತನಾಡಿ ಗ್ರಾಮೀಣ ಭಾಗದ ಮಕ್ಕಳ ಶಿಕ್ಷಣ ಸುಧಾರಣೆ ಆಗುತ್ತಿರುವುದು ಶ್ಲಾಘನೀಯ ಸಂಗತಿಯಾಗಿದೆ ಎಂದರು.

ಆಪ್ಸ್ ಕೋಸ್ ಅಧ್ಯಕ್ಷರಾದ ಬಿ.ಎ.ಇಂದುಧರ ಗೌಡ್ರು ಮಾತನಾಡಿ ಗುಣಾತ್ಮಕ ಶಿಕ್ಷಣಕ್ಕೆ ಉತ್ತೇಜನ ನೀಡುವ ಕೆಲಸ ಆಗಬೇಕು, ಪ್ರಯತ್ನ ಹಾಗೂ ಪರಿಶ್ರಮ ಅಗತ್ಯ. ಶಾಸಕರ ವಿಶೇಷ ಆಸಕ್ತಿಯಿಂದ ತಾಲೂಕಿನ ಶೈಕ್ಷಣಿಕ ಪ್ರಗತಿ ಉತ್ತಮವಾಗಿದೆ, ಅಷ್ಟೇ ಅಲ್ಲದೆ ತಾಲೂಕಿನ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ ಎಂದರು.

Edited By : PublicNext Desk
Kshetra Samachara

Kshetra Samachara

09/01/2025 08:17 pm

Cinque Terre

720

Cinque Terre

0

ಸಂಬಂಧಿತ ಸುದ್ದಿ