ಬೆಂಗಳೂರು : ನಿಮ್ಹಾನ್ಸ್‌ನಲ್ಲಿ ಕರ್ನಾಟಕ ಆಡಳಿತ ಸೇವೆಯ ಅಧಿಕಾರಿಯ ನೇಮಕಕ್ಕೆ ವೈದ್ಯಕೀಯ ಶಿಕ್ಷಣ ಇಲಾಖೆಗೆ ಸಿಎಂ ಸೂಚನೆ
ನಿಮ್ಹಾನ್ಸ್‌ನಲ್ಲಿ ಕರ್ನಾಟಕ ಆಡಳಿತ ಸೇವೆಯ ಅಧಿಕಾರಿಯ ನೇಮಕಾತಿಗೆ ಕ್ರಮ ಕೈಗೊಳ್ಳಿ ಎಂದು ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ವೈದ್ಯಕೀಯ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನೆ ಸಭೆಯಲ್ಲಿ ಸಿಎಂ ಸೂಚನೆ ನೋಡಿದ್ದಾರೆ.
ಅಲ್ದೇ ರಾಜೀವ್ ಗಾಂಧಿ ವೈದ್ಯಕೀಯ ವಿವಿಯಲ್ಲಿ ಹೆಚ್ಚುವರಿಯಾಗಿ ಸಂಗ್ರಹವಾಗಿರುವ ಮೊತ್ತವನ್ನು ಸರ್ಕಾರಿ ವೈದ್ಯಕೀಯ ಕಾಲೇಜುಗಳ ಮೂಲಸೌಲಭ್ಯಗಳಿಗಾಗಿ ಒದಗಿಸಲು ಕ್ರಮಕ್ಕೆ ಸೂಚನೆ ನೀಡಿದರು, ಪ್ರಸ್ತುತ ಸಾಲಿನಲ್ಲಿ ವೈದ್ಯಕೀಯ ಕಾಲೇಜುಗಳ ನಿರ್ಮಾಣ, ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳ ನಿರ್ಮಾಣ ಕಾಮಗಾರಿಗಳನ್ನ ಆದಷ್ಟು ಬೇಗನೆ ಪೂರ್ಣಗೊಳಿಸಲು ಸೂಚಿಸಿದರು.
2023-24 ಸಾಲಿನಲ್ಲಿ ಅನುಮೋದನೆಗೊಂಡು, ಎಲ್ಲಾ ಕಾಮಗಾರಿಗಳನ್ನು ನಿಗದಿತ ಸಮಯದ ಒಳಗಾಗಿ ಪೂರ್ಣಗೊಳಿಸಬೇಕು. ರಾಜೀವ್ ಗಾಂಧಿ ವೈದ್ಯಕೀಯ ವಿಶ್ವವಿದ್ಯಾಲಯದಲ್ಲಿ ಹೆಚ್ಚುವರಿಯಾಗಿ ಸಂಗ್ರಹವಾಗಿರುವ ಮೊತ್ತವನ್ನು ಸರ್ಕಾರಿ ವೈದ್ಯಕೀಯ ಕಾಲೇಜುಗಳ ಮೂಲಸೌಲಭ್ಯಗಳಿಗಾಗಿ ಒದಗಿಸುವ ಕುರಿತು ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.
ಅಲ್ದೇ ಕ್ಯಾನ್ಸರ್ ಪ್ರಮಾಣ ಹೆಚ್ಚಳವಾಗಲು ಕಾರಣ ಕುರಿತು ಅಧ್ಯಯನ ನಡೆಸಿ ವರದಿ ಸಲ್ಲಿಸಿ, ಕ್ಯಾನ್ಸರ್ ಚಿಕಿತ್ಸೆಗೆ ಅಂತಾರಾಷ್ಟ್ರೀಯ ಗುಣಮಟ್ಟದ ಚಿಕಿತ್ಸೆ ರಾಜ್ಯದಲ್ಲಿಯೇ ಲಭ್ಯವಾಗುವಂತೆ ಕ್ರಮ ಕೈಗೊಳ್ಳಬೇಕು ಎಂದು ಸಭೆಯಲ್ಲಿ ಅಧಿಕಾರಿಗಳಿಗೆ ಸಿಎಂ ಸೂಚನೆ ನೀಡಿದರು.
PublicNext
09/01/2025 09:17 pm