ಮಂಗಳೂರು: ಷೇರು ಮಾರುಕಟ್ಟೆಯಲ್ಲಿ ಲಾಭಾಂಶದ ಆಮಿಷವೊಡ್ಡಿ ವ್ಯಕ್ತಿಯೊಬ್ಬರಿಗೆ 10.32 ಲಕ್ಷ ರೂಪಾಯಿ ವಂಚನೆಗೈದ ಪ್ರಕರಣದಲ್ಲಿ ಬ್ಯಾಂಕ್ ಖಾತೆಗಳಿಗೆ ಹಣ ವರ್ಗಾಯಿಸಲು ಸಹಕರಿಸಿದ ಕೇರಳ ಮೂಲದ ಖದೀಮನನ್ನು ಮಂಗಳೂರು ಸೆನ್ ಪೊಲೀಸರು ಹೆಡೆಮುರಿಕಟ್ಟಿ ಬಂಧಿಸಿದ್ದಾರೆ.
ಕೇರಳ ರಾಜ್ಯ, ತ್ರಿಶೂರ್ ಜಿಲ್ಲೆಯ ಚೆಂಬುಚೀರ ಪೋಸ್ಟ್‌ನ ಮಟ್ಟೂರು ನೂಲುವ್ಯಾಲಿ ನಿವಾಸಿ ನಿಧಿನ್ ಕುಮಾರ್ ಕೆ.ಎಸ್. ಬಂಧಿತ ಆರೋಪಿ.
ಅಪಚಿರಿತನೊಬ್ಬ ಪಿರ್ಯಾದಿದಾರ ವ್ಯಕ್ತಿಯ ವಾಟ್ಸಾಪ್‌ನಲ್ಲಿ ಷೇರು ಮಾರುಕಟ್ಟೆಯಲ್ಲಿ ಹಣ ತೊಡಗಿಸಿದರೆ ಹೆಚ್ಚಿನ ಲಾಭಾಂಶ ಸಿಗಬಹುದು ಎಂಬುದಾಗಿ ನಂಬಿಸಿದ್ದಾನೆ. ಆತನ ಮಾತನ್ನು ನಂಬಿದ ಪಿರ್ಯಾದಿದಾರರು ಷೇರು ಮಾರುಕಟ್ಟೆಯಲ್ಲಿ ಹಣ ವಿನಿಯೋಗಿಸುವ ಬಗ್ಗೆ ಪಿರ್ಯಾದಿದಾರರಿಂದ ಹಂತಹಂತವಾಗಿ ಒಟ್ಟು 10,32,000 ರೂಪಾಯಿ ಹಣವನ್ನು ಪಡೆದು ವಂಚಿಸಿದ್ದ. ಈ ಬಗ್ಗೆ ದೂರು ನೀಡಿದಂತೆ ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿತ್ತು.
ಪ್ರಕರಣಕ್ಕೆ ಸಂಬಂಧಿಸಿದಂತೆ ಪಿರ್ಯಾದಿದಾರರಿಂದ ಹಣ ವರ್ಗಾವಣೆಯಾಗಿದ್ದ ಬ್ಯಾಂಕ್ ಖಾತೆಗಳಿಂದ ವಿವಿಧ ಬ್ಯಾಂಕ್ ಖಾತೆಗಳಿಗೆ ಹಣ ವರ್ಗಾವಣೆಯಾಗಿತ್ತು. ಖಾತೆದಾರರ ವಿವರವನ್ನು ಸಂಗ್ರಹಿಸಿ ನೋಡಿದಾಗ ನಿಧಿನ್ ಕುಮಾರ್ ಕೆ.ಎಸ್ ಎಂಬಾತನ ಬ್ಯಾಂಕ್ ಖಾತೆಗೆ 1,00,000ರೂ. ಹಣ ವರ್ಗಾವಣೆಯಾಗಿತ್ತು. ಈತನು ತನ್ನ ಸ್ನೇಹಿತ ತಿಳಿಸಿದಂತೆ ವಿವಿಧ ಬ್ಯಾಂಕ್ ಖಾತೆಗಳಿಗೆ ಕಮಿಷನ್ ಪಡೆದುಕೊಂಡು ಹಣ ವರ್ಗಾವಣೆ ಮಾಡಿದ್ದ. ಆದ್ದರಿಂದ ಆರೋಪಿಯನ್ನು ದಸ್ತಗಿರಿ ಮಾಡಿ ಕ್ರಮ ಜರುಗಿಸಲಾಗಿದೆ. ಈತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದೆ.
PublicNext
09/01/2025 11:05 pm