ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಾಪು: ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವಕ್ಕೆ ಸಿಎಂ, ಸಚಿವರಿಗೆ ಆಹ್ವಾನ

ಕಾಪು: ಇಲ್ಲಿನ ಶ್ರೀ ಹೊಸಮಾರಿಗುಡಿ ದೇವಸ್ಥಾನದಲ್ಲಿ ಫೆಬ್ರವರಿ 25ರಿಂದ ಮಾರ್ಚ್ 6ರವರೆಗೆ ಜರಗಲಿರುವ ಪ್ರತಿಷ್ಠಾ ಬ್ರಹ್ಮಕಲಶೋತ್ಸವಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಮುಜರಾಯಿ ಇಲಾಖೆಯ ಸಚಿವ ರಾಮಲಿಂಗಾ ರೆಡ್ಡಿ ಅವರಿಗೆ ಆಹ್ವಾನ ನೀಡಲಾಯಿತು.

ಶಾಸಕ ಮತ್ತು ದೇವಸ್ಥಾನ ಅಭಿವೃದ್ಧಿ ಸಮಿತಿ ಕಾರ್ಯಾಧ್ಯಕ್ಷ ಗುರ್ಮೆ ಸುರೇಶ್‌ ಶೆಟ್ಟಿ ನೇತೃತ್ವದಲ್ಲಿ ಸಚಿವರನ್ನು ಭೇಟಿ ಮಾಡಲಾಗಿದ್ದು, ದೇವಸ್ಥಾನದ ಜೀರ್ಣೋದ್ಧಾರ ಮತ್ತು ಅಭಿವೃದ್ಧಿಗೆ ಇಲಾಖೆ ಮತ್ತು ಸರಕಾರದಿಂದ ಅನುದಾನ ಒದಗಿಸುವಂತೆ ಮನವಿಯನ್ನೂ ಮಾಡಲಾಯಿತು. ದೇವಸ್ಥಾನ ಅಭಿವೃದ್ಧಿ ಸಮಿತಿ ಅಧ್ಯಕ್ಷ ಕೆ. ವಾಸುದೇವ ಶೆಟ್ಟಿ, ವ್ಯವಸ್ಥಾಪನ ಸಮಿತಿ ಅಧ್ಯಕ್ಷ ನಡಿಕೆರೆ ರತ್ನಾಕರ ಶೆಟ್ಟಿ, ಅಭಿವೃದ್ಧಿ ಸಮಿತಿ ಗೌರವಾಧ್ಯಕ್ಷ ಮತ್ತು ಮಾಜಿ ಶಾಸಕ ಲಾಲಾಜಿ ಆರ್‌. ಮೆಂಡನ್‌, ಸಮಿತಿ ಉಪಾಧ್ಯಕ್ಷ ಡಾ| ದೇವಿಪ್ರಸಾದ್‌ ಶೆಟ್ಟಿ ಬೆಳಪು ಮೊದಲಾದವರು ಉಪಸ್ಥಿತರಿದ್ದರು.

Edited By : PublicNext Desk
PublicNext

PublicNext

10/01/2025 10:32 am

Cinque Terre

12.51 K

Cinque Terre

0

ಸಂಬಂಧಿತ ಸುದ್ದಿ